ಫೆಬ್ರವರಿ 18 ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ 8 ತಂಡಗಳು ಪಾಲ್ಗೊಳ್ಳುತ್ತಿವೆ. ಪಾಕಿಸ್ತಾನ ಹಾಗೂ ಯುಎಇ ಆತಿಥ್ಯದಲ್ಲಿ ನಡೆಯಲ್ಲಿರುವ ಈ ಐಸಿಸಿ ಟೂರ್ನಿಯಲ್ಲಿ ಟೀಂ ಇಂಡಿಯಾದ ಪಂದ್ಯಗಳು ಯುಎಇಯಲ್ಲಿ ನಡೆದರೆ, ಉಳಿದ ತಂಡಗಳ ಪಂದ್ಯಗಳಿಗೆ ಪಾಕಿಸ್ತಾನ ಆತಿಥ್ಯ ನೀಡಲಿದೆ. ಇನ್ನು ಈ ಟೂರ್ನಿಗೆ ತಂಡಗಳನ್ನು ಪ್ರಕಟಿಸಲು ಎಲ್ಲಾ ಕ್ರಿಕೆಟ್ ಮಂಡಳಿಗೆ ಐಸಿಸಿ,
ಜನವರಿ 12 ವರೆಗೆ ಗಡುವು ನೀಡಿತ್ತು. ಆದರೆ ಗಡುವು ಮುಗಿಯುತ್ತಾ ಬಂದರೂ ಇದುವರೆಗೆ ಕೇವಲ 4 ಕ್ರಿಕೆಟ್ ಮಂಡಳಿಗಳು ಮಾತ್ರ ತಮ್ಮ ತಮ್ಮ ತಂಡಗಳನ್ನು ಪ್ರಕಟಿಸಿವೆ. ಉಳಿದ 4 ಕ್ರಿಕೆಟ್ ಮಂಡಳಿಗಳು ಮಾತ್ರ ಮುಂದಿನ ದಿನಗಳಲ್ಲಿ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಟೀಂ ಇಂಡಿಯಾದ ವಿಚಾರಕ್ಕೆ ಬಂದರೆ, ಜನವರಿ 18 ಅಥವಾ 19 ರಂದು ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Mouth Wash Effects: ಬ್ರಷ್ ಮಾಡಿದ ನಂತರ ಮೌತ್ ವಾಶ್ ಬಳಸುತ್ತೀರಾ..? ಹಾಗಾದ್ರೆ ಅನುಕೂಲಕ್ಕಿಂತ ಅಪಾಯವೇ ಹೆಚ್ಚು!
ಇನ್ನೂ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ. ಭಾರತ ತಂಡ ತನ್ನ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಲಿದ್ದರೂ, 8 ವರ್ಷಗಳ ಬಳಿಕ ಮತ್ತೆ ನಡೆಯುತ್ತಿರುವ ಪ್ರತಿಷ್ಠಿತ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ತಂಡದ ನಾಯಕ ಆತಿಥೇಯ ರಾಷ್ಟ್ರ ಪಾಕಿಸ್ತಾನಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಚಾಂಪಿಯನ್ಸ್ ಟ್ರೋಫಿಯ ಅದ್ಧೂರಿ ಉದ್ಘಾಟನಾ ಸಮಾರಂಭವನ್ನು ಫೆ.16 ಅಥವಾ 17 ರಂದು ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದ್ದು, ಅಭ್ಯಾಸ ಪಂದ್ಯದ ವೇಳಾಪಟ್ಟಿ ಇದಾಗಿದೆ. ಎಲ್ಲಾ ತಂಡದ ನಾಯಕರು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇದು ಐಸಿಸಿ ಕಾರ್ಯಕ್ರಮಗಳಿಗೆ ಸಾಮಾನ್ಯ ಪದ್ಧತಿಯಾಗಿದೆ.
29 ವರ್ಷಗಳ ನಂತರ ಪಾಕಿಸ್ತಾನದಲ್ಲಿ ಮೆಗಾ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯನ್ನು ಪಿಸಿಬಿ ಮತ್ತೆ ಆಯೋಜಿಸುತ್ತಿದೆ. ಈ ಹಿನ್ನೆಲೆಯಲ್ಲಿ ಅದ್ದೂರಿ ಕಾರ್ಯಕ್ರಮ ನಡೆಸಲು ಯೋಜನೆ ರೂಪಿಸಲಾಗಿದೆ. ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಭಾರತೀಯ ತಂಡದ ನಾಯಕ ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.