ಬೆಂಗಳೂರು: ಹಿರಿಯ ನಟ ಸರಿಗಮ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನ್ಯುಮೋನಿಯಾಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು ಬೆಳಿಗ್ಗೆ 9:45ಕ್ಕೆ ನಿಧನ ಹೊಂದಿದ್ದಾರೆ.
ಇನ್ನೂ ಆಸ್ಪತ್ರೆಯಿಂದ ವಿಜಿ ನಿವಾಸಕ್ಕೆ ಮೃತದೇಹ ರವಾನೆಯಾಗಲಿದೆ. ಮಹಾಲಕ್ಷ್ಮಿಪುರಂನಲ್ಲಿರುವ ವಿಜಿ ನಿವಾಸಕ್ಕೆ ಮೃತದೇಹ ರವಾನೆಯಾಗಲಿದೆ. ಕುಟುಂಬಸ್ಥರು, ಸಂಬಂಧಿಕರು ಅಂತಿಮ ದರ್ಶನ ಪಡೆದ ಬಳಿಕ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.
ಮೊಟ್ಟೆ ಜೊತೆ ಅಪ್ಪಿ ತಪ್ಪಿಯೂ ಈ ಪದಾರ್ಥಗಳನ್ನು ಸೇವಿಸಬಾರದು! ತಿಂದರೆ ಅಪಾಯ ಕಟ್ಟಿಟ್ಟ ಬುತ್ತಿ
ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುವ ಸಂಬಂಧ ಫಿಲಂ ಛೇಂಬರ್ ಅಧ್ಯಕ್ಷ ನರಸಿಂಹಲು ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿದ್ದಾರೆ. ನಾಳೆ ಮಧ್ಯಾಹ್ನದ ನಂತರ ಅಂತ್ಯಕ್ರಿಯೆ ನಡೆಸಲು ಕುಟುಂಬ ನಿರ್ಧಾರ ಮಾಡಿದೆ. ನಾಳೆ ಬೆಳಗ್ಗೆ 10 ಗಂಟೆಯಿಂದ 11 ಗಂಟೆವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಂತರ ಚಾಮರಾಜಪೇಟೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.