ಬಾರ್ಡರ್ ಗಾವಸ್ಕರ್ ಟ್ರೋಫಿ ಸರಣಿಯಲ್ಲಿ ಅಭೂತಪೂರ್ವ ಪ್ರದರ್ಶನ ನೀಡಿದ ಭಾರತ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಐಸಿಸಿ ಟೆಸ್ಟ್ ರ್ಯಾಂಕಿಂಗ್ನ ಬೌಲರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಅದಲ್ಲದೆ ಡಿಸೆಂಬರ್ ತಿಂಗಳಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆಡಿದ್ದ ಜಸ್ಪ್ರೀತ್ ಬುಮ್ರಾ ಅದ್ಭುತ ಪ್ರದರ್ಶನ ನೀಡಿದ್ದರು.
ಆಸ್ಟ್ರೇಲಿಯಾ ವಿರುದ್ಧದ ಈ ಸರಣಿಯಲ್ಲಿ ಅಡಿಲೇಡ್ನಲ್ಲಿ 61ಕ್ಕೆ 4, ಬ್ರಿಸ್ಬೇನ್ನಲ್ಲಿ 76ಕ್ಕೆ 6, ಮತ್ತು ಮೆಲ್ಬೋರ್ನ್ನಲ್ಲಿ 9 ವಿಕೆಟ್ಗಳನ್ನು ಕಬಳಿಸಿ ಮಿಂಚಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ ಡಿಸೆಂಬರ್ ತಿಂಗಳ ಅಟಗಾರರ ಪಟ್ಟಿಗೆ ನಾಮನಿರ್ದೇನಗೊಂಡಿದ್ದರು.
ಮೊಟ್ಟೆ ಜೊತೆ ಅಪ್ಪಿ ತಪ್ಪಿಯೂ ಈ ಪದಾರ್ಥಗಳನ್ನು ಸೇವಿಸಬಾರದು! ತಿಂದರೆ ಅಪಾಯ ಕಟ್ಟಿಟ್ಟ ಬುತ್ತಿ
ಇದೀಗ ಪ್ಯಾಟ್ ಕಮಿನ್ಸ್ ಹಾಗೂ ಡೇನ್ ಪ್ಯಾಟರ್ಸನ್ ಅವರನ್ನು ಹಿಂದಿಕ್ಕಿ ಜಸ್ ಪ್ರೀತ್ ಬುಮ್ರಾ ಡಿಸೆಂಬರ್ ತಿಂಗಳ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಐಸಿಸಿ ಪ್ರತಿ ತಿಂಗಳು ಪ್ಲೇಯರ್ ಆಫ್ ದಿ ಮಂತ್ ಪ್ರಶಸ್ತಿಗಾಗಿ ಆಟಗಾರರನ್ನು ಆಯ್ಕೆ ಮಾಡುತ್ತಿದ್ದು, ಅದರಂತೆ ಕಳೆದ ತಿಂಗಳ ಅತ್ಯುತ್ತಮ ಆಟಗಾರನ ಪ್ರಶಸ್ತಿ ಜಸ್ಪ್ರೀತ್ ಬುಮ್ರಾಗೆ ಒಲಿದಿದೆ.