ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಸದ್ಯ ಅವರನ್ನು ಮುಂಬೈ ನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯರಾತ್ರಿ ಸುಮಾರು 2.30 ಕ್ಕೆ ಬಾಂದ್ರಾದಲ್ಲಿರುವ ಅವರ ಮನೆಯಲ್ಲಿ ನಡೆದಿದೆ. ದರೋಡೆ ನಡೆಸಲು ಬಂದವರಿಂದ ಈ ಕೃತ್ಯ ನಡೆದು ಬಂದಿದೆ ಎಂದು ತಿಳಿದು ಬಂದಿದೆ.
ಇನ್ನೂ ಈ ಘಟನೆ ಸಂಬಂಧ ಮುಂಬೈ ಪೊಲೀಸರು ಮಿಂಚಿನ ಕಾರ್ಯಾಚಾರಣೆ ನಡೆಸಿ ಮೂವರು ಶಂಕಿತರನ್ನು ಬಂಧಿಸಿದ್ದಾರೆ. ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಕೆಲವೇ ಹೊತ್ತಿನಲ್ಲಿ ನಟನ ನಿವಾಸಕ್ಕೆ ಆಗಮಿಸಿದ ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು.
Thursday Color: ಗುರುವಾರ ಹಳದಿ ಬಣ್ಣದ ಬಟ್ಟೆ ಧರಿಸಿದರೆ ಎಷ್ಟೆಲ್ಲಾ ಪ್ರಯೋಜನಗಳೇನು ಗೊತ್ತಾ..?
ಸೈಫ್ ಅಲಿ ಖಾನ್ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳ ಪತ್ತೆ ಹಲವು ತಂಡಗಳನ್ನು ರಚಿಸಿ ಮಿಂಚಿನ ಕಾರ್ಯಾಚರಣೆ ನಡೆಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.