ಬೆಂಗಳೂರು: ಕಚ್ಚಾ ತೈಲಗಳಾದ ಪೆಟ್ರೋಲ್ ಡೀಸೆಲ್ ಕೂಡ ಬೆಲೆಗಳಲ್ಲಿ ಏರಿಳಿತಕ್ಕೊಳಗಾಗುತ್ತಿದ್ದು, ದಿನಂಪ್ರತಿ ಬಳಕೆಯಾಗುವ ಈ ಇಂಧನಗಳು ಒಮ್ಮೊಮ್ಮೆ ಬೆಲೆ ಏರಿಸಿಕೊಂಡಿರುವುದು ವಾಹನ ಚಾಲಕರಿಗೆ ತಲೆನೋವಿನ ಸಮಸ್ಯೆಯಾಗಿದೆ. ನವೀಕರಿಸಲಾಗದೇ ಇರುವ ಇಂಧನಗಳಾಗಿ ಗುರುತಿಸಿಕೊಂಡಿರುವ ಪೆಟ್ರೋಲ್, ಡೀಸೆಲ್ ಅನ್ನು ಹಲವಾರು ಪ್ರಕ್ರಿಯೆಗಳ ಮೂಲಕ ಶುದ್ಧೀಕರಿಸಿ ಬಳಕೆಗೆ ಲಭ್ಯವಾಗಿಸಲಾಗುತ್ತದೆ.
ಇಂದು ನವದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 100.75 ರೂ. ಇದೆ.
Thursday Color: ಗುರುವಾರ ಹಳದಿ ಬಣ್ಣದ ಬಟ್ಟೆ ಧರಿಸಿದರೆ ಎಷ್ಟೆಲ್ಲಾ ಪ್ರಯೋಜನಗಳೇನು ಗೊತ್ತಾ..?
ದೇಶದ ರಾಜಧಾನಿ ನವದೆಹಲಿಯಲ್ಲಿ ಡೀಸೆಲ್ ಬೆಲೆ 87.62 ರೂ. ಅದೇ ಸಮಯದಲ್ಲಿ ಮುಂಬೈನಲ್ಲಿ ಡೀಸೆಲ್ ಬೆಲೆ 92.15 ರೂ. ಕೋಲ್ಕತ್ತಾದಲ್ಲಿ ಡೀಸೆಲ್ ಬೆಲೆ ಲೀಟರ್ಗೆ 90.76 ರೂ ಮತ್ತು ಚೆನ್ನೈನಲ್ಲಿ ಡೀಸೆಲ್ ಬೆಲೆ ಲೀಟರ್ಗೆ 92.34 ರೂ. ಇದೆ.
ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಯನ್ನು ಆಧರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ಪರಿಶೀಲಿಸಿದ ನಂತರ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರ್ಧರಿಸುತ್ತವೆ.
ಬೆಂಗಳೂರಲ್ಲಿ ಇಂದು ಪೆಟ್ರೋಲ್ ರೂ. 102.92, ಡೀಸೆಲ್ ದರ ರೂ. 88.99 ಆಗಿದೆ. ಹಾಗೆಯೇ ಚೆನ್ನೈ, ಮುಂಬೈನಲ್ಲಿ ಪೆಟ್ರೋಲ್ ದರ ಕ್ರಮವಾಗಿ ರೂ.100.80, ರೂ. 103.50 ಆಗಿದೆ. ಜತೆಗೆ ಡೀಸೆಲ್ ದರ ಕ್ರಮವಾಗಿ ರೂ. 92.48, ರೂ. 90.03 ಇದೆ. ಇನ್ನು, ಕೊಲ್ಕತ್ತಾ ಮತ್ತು ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ಕ್ರಮವಾಗಿ ರೂ. 105.01, ರೂ. 94.77 ಇದ್ದರೆ, ಡೀಸೆಲ್ ದರ ರೂ. 91.82, ರೂ. 87.67 ಆಗಿದೆ.