ಯಾದಗಿರಿ ಜಿಲ್ಲೆಯ ಸುರಪುರ ನಗರದ ಕುಂಬಾರಪೇಟೆ ಸೀಮಾಂತರದಲ್ಲಿ ಎದ್ದಿಲ್ಲದೆ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆದಿದ್ದು ಸಂಬಂಧಪಟ್ಟ ಅಧಿಕಾರಿಗಳು ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಳೆದ ಹಲವು ದಿನಗಳಿಂದ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದು ಭೂಗರ್ಭ ಅಗೆದು ನೈಸರ್ಗಿಕ ಸಂಪತ್ತಿಗೆ ಆಪತ್ತು ತರಲಾಗಿದ್ದು. ಸಂಬಂಧಪಟ್ಟ ತಾಲೂಕು ಆಡಳಿತ ಕಂಡು ಕಾಣದಂತೆ ವರ್ತಿಸುತ್ತಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ನಗರ ಪ್ರದೇಶದಿಂದ ಕೂಗುಳತಿ ದೂರದಲ್ಲಿಯೂ ಇಂತಹ ಅಕ್ರಮ ನಡೆಯುತ್ತಿದ್ದರು ಸಹ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾತ್ರ ಕ್ಯಾರೆಯನ್ನದಿರುವುದು ಅಕ್ರಮಕ್ಕೆ ಅಧಿಕಾರಿಗಳ ಸಾತ್ ಇದೆಯಾ ಎನ್ನುವ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಸದೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಅಕ್ರಮ ಮಣ್ಣು ಗಣಿಗಾರಿಕೆಯನ್ನು ತಡೆಯುತ್ತಾರ ಕಾದು ನೋಡಬೇಕಿದೆ