ದೊಡ್ಡಬಳ್ಳಾಪುರ: ಹಿಂಬದಿಯಿಂದ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಗೇಟ್ ಬಳಿ ನಡೆದಿದೆ. ವೆಂಕಟೇಶ್ ಮೂರ್ತಿ ( 31) , ಮೋಕ್ಷೀತಾ (8) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ತಾಲೂಕಿನ ಕೆಳಗಿನ ಜೋಗನಹಳ್ಳಿ ನಿವಾಸಿಯಾದ ಮೃತ ವೆಂಕಟೇಶ್ ಮೂರ್ತಿ ತನ್ನ ತಂಗಿ ಹಾಗೂ ಆಕೆಯ ಮಗಳೊಂದಿಗೆ ದೊಡ್ಡಬಳ್ಳಾಪುರ ಕ್ಕೆ ತೆರಳುತ್ತಿದ್ರು, ಈ ವೇಳೆ ಹಿಂದೂಪುರದಿಂದ ದೊಡ್ಡಬಳ್ಳಾಪುರ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿಸಿ ಬಸ್ ಬೈಕ್ ಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ನಲ್ಲಿದ್ದ ವೆಂಕಟೇಶ್ ಮೂರ್ತಿ ಸ್ಥಳದಲ್ಲೆ ಸಾವನ್ನಪ್ಪಿದ್ದು,
Pumpkin Seeds: ಕುಂಬಳಕಾಯಿ ಬೀಜ ತಿಂದ್ರೆ ಈ ಆರೋಗ್ಯ ಸಮಸ್ಯೆಗಳು ಹತ್ತಿರವೂ ಸುಳಿಯಲ್ಲ!
ತಂಗಿಯ ಮಗಳಿಗೆ ತೀವ್ರ ಗಾಯ, ಆಸ್ಪತ್ರೆಗೆ ಸೇರಿಸುವ ಮಾರ್ಗ ಮದ್ಯ ಬಾಲಕಿ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ದೊಡ್ಡಬಳ್ಳಾಪುರ ನಗರದ ಶವಗಾರಕ್ಕೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಪೊಲೀಸರಿಂದ ಕೆ.ಎಸ್.ಆರ್ಟಿಸಿ ಬಸ್ ಚಾಲಕನ ವಶಕ್ಕೆ ಪಡೆಯಲಾಗಿದೆ.