ಮೈಸೂರು: ಕುಟುಂಬಸ್ಥರ ಜೊತೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಟ ದರ್ಶನ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಂಕ್ರಾಂತಿ ಹಬ್ಬದ ಸಂಭ್ರಮದಿಂದ ಆಚರಿಸಿದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ ಹಾಗೂ ಸ್ನೇಹಿತರ ಜೊತೆ ಚಾಮುಂಡಿ ಬೆಟ್ಟಕ್ಕೆ ದರ್ಶನ್ ಭೇಟಿ ನೀಡಿದ್ದಾರೆ.
ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ, ದೇವಸ್ಥಾನದಲ್ಲಿ ನಟನ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಫ್ಯಾನ್ಸ್ ಮುಗಿಬಿದ್ದಿದ್ದಾರೆ. ಜಾಮೀನು ಸಿಕ್ಕ ಬಳಿಕ ದರ್ಶನ್ ಅವರು ಕುಟುಂಬದ ಜೊತೆ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಕೊಲೆ ಆರೋಪದ ಸಂಕಷ್ಟದಿಂದ ಪಾರಾಗಲು ದೇವರ ಮೊರೆ ಹೋಗಿದ್ದಾರೆ.
Pumpkin Seeds: ಕುಂಬಳಕಾಯಿ ಬೀಜ ತಿಂದ್ರೆ ಈ ಆರೋಗ್ಯ ಸಮಸ್ಯೆಗಳು ಹತ್ತಿರವೂ ಸುಳಿಯಲ್ಲ!
ಇನ್ನೂ ನಟ ದರ್ಶನ್ ಸಂಕ್ರಾಂತಿ ಹಬ್ಬವನ್ನ ಕುಟುಂಬ ಸದಸ್ಯರ ಜೊತೆ ಭರ್ಜರಿಯಾಗಿ ಆಚರಿಸಿದ್ದಾರೆ. ತಮ್ಮ ಫಾರ್ಮ್ ಹೌಸ್ ನಲ್ಲಿ ಸಂಕ್ರಾಂತಿಯ ಕಿಚ್ಚು ಹಾಯಿಸಿದ್ದಾರೆ. ಪತ್ನಿ ವಿಜಯಲಕ್ಷ್ಮೀ , ಮಗ ವಿನೀಶ್ , ಸಹೋದರ ದಿನಕರ್ ಜೊತೆಗೆ ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿಯನ್ನ ಸ್ವಾಗತಿಸಿದ್ದಾರೆ.