ಗದಗ: ಪ್ರೀತಿ, ಪ್ರೇಮ ವಿಚಾರವಾಗಿ 15 ವರ್ಷದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಬಣಗಾರ ಕಾಲೋನಿಯಲ್ಲಿ ನಡೆದಿದೆ. 15 ವರ್ಷದ ಖುಷಿ ರಂಗ್ರೇಜಿ ಎಂಬ ಬಾಲಕಿ ಮೃತ ದುರ್ದೈವಿಯಾಗಿದ್ದು 9ನೇ ತರಗತಿ ಓದುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇನ್ನು ಘಟನೆಗೆ ಕಾರಣ 18 ವರ್ಷದ ಮುತ್ತುರಾಜ್ ಮ್ಯಾಗೇರಿ ಹಾಗೂ 19 ವರ್ಷದ ಜುನೇದಸಾಬ್ ಕಂದಗಲ್ ಎಂಬ ವಿದ್ಯಾರ್ಥಿಗಳು ಎನ್ನಲಾಗ್ತಿದ್ದು, ಲವ್ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಅಂತ ಮೃತ ಬಾಲಕಿ ಕುಟುಂಬಸ್ಥರ ಆರೋಪವಾಗಿದೆ. ಈ ಇಬ್ಬರು ಸೇರಿ ಖುಷಿಯನ್ನು ಲವ್ ಮಾಡ್ತಿದ್ದರು ಎನ್ನಲಾಗ್ತಿದೆ.
Pumpkin Seeds: ಕುಂಬಳಕಾಯಿ ಬೀಜ ತಿಂದ್ರೆ ಈ ಆರೋಗ್ಯ ಸಮಸ್ಯೆಗಳು ಹತ್ತಿರವೂ ಸುಳಿಯಲ್ಲ!
ಈ ವಿಷಯ ಮನೆಯವರಿಗೆ ಗೊತ್ತಾಗಿ ಇಬ್ಬರಿಗೂ ತಾಕೀತು ಮಾಡಿದ್ರು. ಆದ್ರೂ ಇಬ್ಬರು ಆಗಾಗ ಭೇಟಿಯಾಗಿ ಮಾತನಾಡುವುದು, ಟಾರ್ಚರ್ ನಿಂದ ಬಾಲಕಿ ನೇಣು ಬಿಗಿದುಕೊಂಡು ಮೃತಪಟ್ಟಿರುವುದಾಗಿ ಕುಟುಂಬಸ್ಥರ ಆರೋಪವಾಗಿದೆ. ವಿದ್ಯಾರ್ಥಿಗಳಾದ ಜುನೇದಸಾಬ್ ಹಾಗೂ ಮುತ್ತುರಾಜ್ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ರೋಣ ಸಿಪಿಐ ಹಾಗೂ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಾಜಿ ಸಚಿವ ಕಳಕಪ್ಪ ಬಂಡಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಒಟ್ಟಾಗಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.