ಬೆಂಗಳೂರು:- ಮಹಿಳೆಯರ ಖಾಸಗಿತನ ಉಲ್ಲಂಘಿಸೋ ದಾಖಲೆ ನಿಮಗೇಕೆ ಬೇಕು? ಎಂದು ಕೇಳುವ ಮೂಲಕ ಪ್ರಜ್ವಲ್ ಪರ ವಕೀಲರಿಗೆ ಹೈಕೋರ್ಟ್ ಚಾಟಿ ಬೀಸಿದೆ.
ಮಹಿಳೆಯರ ಖಾಸಗಿತನ ಉಲ್ಲಂಘಿಸುವ ದಾಖಲೆಗಳು ನಿಮಗೆ ಏಕೆ ಬೇಕು? ಎಲ್ಲವೂ ಅಶ್ಲೀಲವಾಗಿದೆ. ಅಶ್ಲೀಲತೆಗೆ ಒಂದು ಮಿತಿ ಇರಬೇಕು ಎಂದು ಹೇಳುವ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್ ಚಾಟಿ ಬೀಸಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣದಲ್ಲಿ ಎಸ್ಐಟಿ ಜಪ್ತಿ ಮಾಡಿರುವ ವಿಡಿಯೋ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ನ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಎಸ್ಐಟಿ ಜಪ್ತಿ ಮಾಡಿರುವ ವೀಡಿಯೋಗಳನ್ನು ನೀಡುವಂತೆ ಪ್ರಜ್ವಲ್ ಪರ ವಕೀಲರು ಮನವಿ ಮಾಡಿದರು.
ಇದಕ್ಕೆ ಕೆರಳಿದ ಕೋರ್ಟ್ ಇತರೆ ಮಹಿಳೆಯರ ಖಾಸಗಿತನ ಉಲ್ಲಂಘಿಸುವ ದಾಖಲೆಗಳು ನಿಮಗೆ ಏಕೆ ಬೇಕು? ಎಲ್ಲವೂ ಅಶ್ಲೀಲವಾಗಿದೆ. ಅಶ್ಲೀಲತೆಗೆ ಒಂದು ಮಿತಿ ಇರಬೇಕು ಎಂದು ಬೇಸರ ವ್ಯಕ್ತಪಡಿಸಿತು