ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ ದುಷ್ಕರ್ಮಿ ನಟನ ಮೇಲೆ ಮನಸೋ ಇಚ್ಚೇ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಇದೀಗ ಚಾಕು ಇರಿದ ಪ್ರಕರಣದಲ್ಲಿ ಇಬ್ಬರು ಶಂಕಿತ ವ್ಯಕ್ತಿಗಳನ್ನು ಮುಂಬೈ ಪೊಲೀಸರು ಗುರುತಿಸಿದ್ದು, ಆ ಪೈಕಿ ಓರ್ವ ಶಂಕಿತನ ಫೋಟೋ ಕೂಡ ಲಭ್ಯವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿದೆ. ಸೈಫ್ ಕುಟುಂಬ ವಾಸವಾಗಿರುವ ಅಪಾರ್ಟ್ಮೆಂಟ್ನ ಮೆಟ್ಟಿಲುಗಳನ್ನು ಹತ್ತಿ ಬರುವಾಗ ಸಿಸಿಟಿವಿಯಲ್ಲಿ ಶಂಕಿತನ ವಿಡಿಯೋ ಸೆರೆಯಾಗಿದೆ. ಪ್ರಕರಣದ ಬಗ್ಗೆ ಮುಂಬೈ ಪೊಲೀಸರು ಚುರುಕುಗೊಳಿಸಿದ್ದಾರೆ.
ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ್ದ ವ್ಯಕ್ತಿಯ ಫೋಟೋವನ್ನು ಮುಂಬೈ ಪೊಲೀಸರು ಬಹಿರಂಗಪಡಿಸಿದ್ದಾರೆ. ಗುರುವಾರ ನಸುಕಿನ ಜಾವ 2.33 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಅಪಾರ್ಟ್ಮೆಂಟ್ಗೆ ನುಗ್ಗಿದ್ದರು. ಶಂಕಿತ ಆರೋಪಿ ಅಪಾರ್ಟ್ ಮೆಂಟ್ ನ ಮೆಟ್ಟಿಲುಗಳನ್ನು ಹತ್ತುತ್ತಿರುವ ಫೋಟೋವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಈ ವೇಳೆ ಶಂಕಿತ ವ್ಯಕ್ತಿಯು ಟಿ-ಶರ್ಟ್ ಮತ್ತು ಜೀನ್ಸ್ ಧರಿಸಿದ್ದು ಆತ ಆತ ಯಾರು? ಆತನ ಉದ್ದೇಶ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ದರೋಡೆಕೋರರು ನುಗ್ಗಿದ್ದನ್ನು ಮೊದಲು ನೋಡಿದ್ದು ಸೈಫ್ ಮನೆಯ ಕೆಲಸದವರು. ತಕ್ಷಣವೇ ಸೈಫ್ ಅವರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಸೈಫ್ ದರೋಡೆಕೋರನನ್ನು ಹಿಡಿಯಲು ಮುಂದಾಗಿದ್ದು ಈ ವೇಳೆ ಆರೋಪಿಗಳು ಸೈಪ್ ಅವರಿಗೆ ಚಾಕುವಿನಿಂದ 6 ಬಾರಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಸೈಫ್ ಅಲಿ ಖಾನ್ ಅವರ ಬೆನ್ನು, ಕುತ್ತಿಗೆ, ಕೈ ಮುಂತಾದ ಭಾಗಗಳಿಗೆ ಗಾಯಗಳಾಗಿದ್ದು ತಕ್ಷಣವೇ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸೈಫ್ ಅಲಿ ಖಾನ್ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಬೆನ್ನಿನಲ್ಲಿ ಇದ್ದ ಚಾಕು ಹೊರತೆಗೆಯಲಾಗಿದೆ. ಎಡಗೈ ಮತ್ತು ಕುತ್ತಿಗೆ ಭಾಗಕ್ಕೆ ಪ್ಲಾಸ್ಟಿಕ್ ಸರ್ಜರಿ ತಂಡವರು ಚಿಕಿತ್ಸೆ ನೀಡಿದ್ದಾರೆ. ಸದ್ಯ ನಟನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.