ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ ದುಷ್ಕರ್ಮಿಗಳು ನಟನ ಮೇಲೆ 6 ಭಾರಿ ಚಾಕುವಿನಿಂದ ಇರಿದಿದ್ದಾರೆ. ಸದ್ಯ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಸೈಫ್ ಅಲಿ ಖಾನ್ ಗೆ ಶಸ್ತ್ರ ಚಿಕಿತ್ಸೆ ನಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಗುರುವಾರ ನಸುಕಿನ ಜಾವ 2.30ರ ಸುಮಾರಿಗೆ ದುಷ್ಕರ್ಮಿಗಳು ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ್ ಅವರ ಅಪಾರ್ಟ್ಮೆಂಟ್ಗೆ ನುಗ್ಗಿದ್ದಾರೆ. ಇಬ್ಬರು ಖದೀಮರು ಸೈಫ್ ಮನೆಗೆ ಕನ್ನ ಹಾಕಲು ಪ್ರಯತ್ನಿಸಿದ್ದಾರೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಅನೇಕರಿಂದ ಹೇಳಿಕೆ ಪಡೆದುಕೊಂಡಿದ್ದಾರೆ. ಈ ವೇಳೆ ಸೈಫ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಒಬ್ಬರು ಪೊಲೀಸರ ಎದುರು ಕೆಲವು ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಫೈರ್ ಎಕ್ಸಿಟ್ ಬಳಸಿಕೊಂಡು ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ ಕಳ್ಳರು ಮೊದಲು ಸೈಫ್ ಅಲಿ ಖಾನ್ ಪುತ್ರ ಜೇಹ್ ಅಲಿ ಖಾನ್ ಮಲಗಿದ್ದ ಕೋಣೆಗೆ ಹೋಗಿದ್ದಾರೆ. ಈ ವೇಳೆ ಅಲ್ಲಿದ್ದ ನರ್ಸ್ ಬಳಿ 1 ಕೋಟಿ ಕೊಡುವಂತೆ ಡಿಮ್ಯಾಂಡ್ ಮಾಡಿದ್ದಾರೆ. ಆದರೆ ಅಷ್ಟ ಹಣ ನೀಡಲು ನರ್ಸ್ ಹಿಂದೇಟು ಹಾಕಿದಾಗ ಆಕೆಯ ಮೇಲೆ ಕಳ್ಳರು ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ನರ್ಸ್ ಗೂ ಸಾಕಷ್ಟು ಗಾಯಗಳಾಗಿವೆ.
ಮನೆಗೆ ನುಗ್ಗಿದ್ದ ದುಷ್ಕರ್ಮಿಯು ಅಂದಾಜು 35 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು ಕೈಯಲ್ಲಿ ಚಾಕು ಮತ್ತು ಕೋಲನ್ನು ಹಿಡಿದುಕೊಂಡಿದ್ದ ಎಂದು ನರ್ಸ್ ಹೇಳಿಕೆ ನೀಡಿದ್ದಾರೆ. ಈಗಾಗಲೇ ಆತನ ಗುರುತು ಪತ್ತೆ ಆಗಿದ್ದು, ಶೀಘ್ರದಲ್ಲೇ ಬಂದಿಸುವುದಾಗಿ ಪೊಲೀಸರು ಹೇಳಿದ್ದಾರೆ.
ಜೇಹ್ ಅಲಿ ಖಾನ್ ಮಲಗಿದ್ದ ಕೋಣೆಗೆ ನುಗ್ಗಿದ್ದ ಕಳ್ಳ ದಾಂದಲೆ ಮಾಡಿದಾಗ ಇಡೀ ಮನೆಯಲ್ಲಿ ಇದ್ದವರಿಗೆ ಎಚ್ಚರ ಆಗಿದೆ. ಈ ವೇಳೆ ಸೈಫ್ ಅಲಿ ಖಾನ್ ಕಳ್ಳನನ್ನು ಹಿಡಿಯಲು ಮುಂದಾಗಿದ್ದು ಆ ಸಂದರ್ಭದಲ್ಲಿ ಸೈಫ್ ಮೇಲೆ ಕಳ್ಳ ದಾಳಿ ಮಾಡಿದ್ದಾನೆ. ಈ ದಾಳಿಯಲ್ಲಿ ಸೈಫ್ ಅವರಿಗೆ ಅನೇಕ ಗಂಭೀರ ಗಾಯಗಳು ಪ್ರಣಾಪಾಯದಿಂದ ಪಾರಾಗಿದ್ದಾರೆ.