ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದಾರೆ. ಸದ್ಯ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಇದೀಗ ಅಭಿಮಾನಿಗಳಿಗೆ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಆಪರೇಷನ್ ಬಳಿಕ ನಟ ಪ್ರತಿಕ್ರಿಯಿಸಿದ್ದು, ನಾನು ಕ್ಷೇಮವಾಗಿದ್ದೇನೆ ಎಂದಿದ್ದಾರೆ.
ನಾನು ಕ್ಷೇಮವಾಗಿದ್ದೇನೆ, ಯಾವುದೇ ತೊಂದರೆ ಇಲ್ಲ. ಅಭಿಮಾನಿಗಳ ಪ್ರೀತಿಗೆ ನಾನು ಚಿರಋಣಿ ಅಂತ ಚೂರಿ ಇರಿತದ ಬಳಿಕ ಸೈಫ್ ಅಲಿ ಖಾನ್ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಈ ಘಟನೆ ಬಗ್ಗೆ ಪೊಲೀಸರ ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಎಲ್ಲಾ ಸತ್ಯಾಂಶ ಹೊರ ಬೀಳಲಿದೆ ಎಂದು ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಗುರುವಾರ ನಸುಕಿನ ಜಾವ 2:30ರ ವೇಳೆಗೆ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಸೈಫ್ ಮೇಲೆ 6 ಬಾರಿ ಚಾಕು ಇರಿತ ನಡೆಸಿದ್ದಾರೆ. ಸದ್ಯ ಸೈಫ್ ಅಲಿ ಖಾನ್ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.