ಬೆಂಗಳೂರು:- ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್ ಎದುರಾಗಿದ್ದು, ದರ ಏರಿಕೆ ಫೈನಲ್ ಸಾಧ್ಯತೆ ಇದೆ. ಬಿಎಂಟಿಸಿ, ಕೆಎಸ್ಆರ್ಟಿಸಿ ಪ್ರಯಾಣ ದರ ಏರಿಕೆ ಬೆನ್ನಲ್ಲೆ ಮೆಟ್ರೋ ದರ ಏರಿಕೆ ಶಾಕ್ ಕೂಡ ಇಂದೇ ನಿಗದಿಯಾಗುವ ಸಾಧ್ಯತೆ ಇದೆ.
ಈ ಸಂಬಂಧ ಬಿಎಂಆರ್ಸಿಎಲ್ ಅಧಿಕಾರಿಗಳ ಮತ್ತು ಫೇರ್ ಹೈಕ್ ಕಮಿಟಿಯ ಹೈವೊಲ್ಟೇಜ್ ಸಭೆ ನಡೆಯಲಿದೆ. ಸಭೆಯಲ್ಲಿ ದರ ಏರಿಕೆ ಫೈನಲ್ ಆಗುವ ಸಾಧ್ಯತೆ ಇದೆ. ಸಭೆಯಲ್ಲಿ ದರ ಏರಿಕೆ, ಜೊತೆಗೆ ಪರಿಷ್ಕೃತ ದರ ನಿಗದಿ ದಿನಾಂಕ ಕೂಡ ಫೈನಲ್ ಆಗುವ ಸಾಧ್ಯತೆ ಇದೆ.
ಕಳೆದ ಏಳು ವರ್ಷದಿಂದ ಮೆಟ್ರೋ ಪ್ರಯಾಣ ದರ ಏರಿಕೆ ಆಗಿರಲಿಲ್ಲ. ಈಗ ದರ ಏರಿಕೆಗೆ ಮುಂದಾಗಿರುವ ಬಿಎಂಆರ್ಸಿಎಲ್ ದರ ಏರಿಕೆ ಫೈನಲ್ ಮಾಡುವ ನಿಟ್ಟಿನಲ್ಲಿ ಬೋರ್ಡ್ ಮಿಟಿಂಗ್ ಮಾಡಲಿದೆ. ಬೆಳಗ್ಗೆ 10 ಗಂಟೆಗೆ ಫೇರ್ ಹೈಕ್ ಫಿಕ್ಸೆಷನ್ ಕಮಿಟಿ ಜೊತೆ ಬಿಎಂಆರ್ಸಿಎಲ್ ಅಧಿಕಾರಿಗಳು ಕೂಡ ಭಾಗಿಯಾಗಿ ಫೈನಲ್ ಮಾಡುವ ಸಾಧ್ಯತೆ ಇದೆ. ಸದ್ಯ ಈಗಾಗಲೇ ದರ ಏರಿಕೆ ಸಂಬಂಧ ಕಮಿಟಿ 40% ರಿಂದ 45% ಏರಿಕೆಗೆ ಚಿಂತನೆ ನಡೆಸಿದೆ.