ಬೆಂಗಳೂರು:- ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ರಾಜ್ಯ ಆಡಳಿತ ಮತ್ತು ಸಿಬ್ಬಂಧಿ ಸುಧಾರಣೆ ಇಲಾಖೆ ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ ಒಳಪಡಿಸಿದಾಗ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢವಾಗಿದೆ.
ನಾಲ್ಕು ಗಂಟೆಯ ವಿಡಿಯೋ ರೆಕಾರ್ಡ್ನಲ್ಲಿ ಒಟ್ಟು ಏಳು ಬಾರಿ ಅವಾಚ್ಯ ಶಬ್ದ ಬಳಕೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದಬಂದಿದೆ, ಹೀಗಾಗಿ, ಅವಾಚ್ಯ ಶಬ್ದ ಬಳಸಿದ ಧ್ವನಿ ಪತ್ತೆಗೆ ಸಿಟಿ ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ. ಆದರೆ ತಾನು ಅವಾಚ್ಯ ಶಬ್ದ ಬಳಸಿಲ್ಲ ಎಂದು ಸಿಟಿ ರವಿ ಹೇಳುತ್ತಿದ್ದಾರೆ. ಜೊತೆಗೆ ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ್ದಾರೆ.