ಬೆಂಗಳೂರು: ಮೆಟ್ರೋ ದರ ಪರಿಷ್ಕರಣೆ ಪ್ರಕ್ರಿಯೆ ಕೊನೆಯ ಹಂತಕ್ಕೆ ತಲುಪಿದೆ. ಈ ಸಂಬಂಧ ಬಿಎಂಆರ್ಸಿಎಲ್ ಅಧಿಕಾರಿಗಳ ಮತ್ತು ಫೇರ್ ಹೈಕ್ ಕಮಿಟಿಯ ಹೈವೊಲ್ಟೇಜ್ ಸಭೆ ನಡೆಸಿದ್ದು, ಬೆಂಗಳೂರು ಮೆಟ್ರೊ ರೈಲ್ ಕಾರ್ಪೊರೇಶನ್ ಲಿಮಿಟೆಡ್ ದರ ಏರಿಕೆಗೆ ಅಸ್ತು ಎಂದಿದೆ.
ಮೆಟ್ರೋ ದರ ಪರಿಷ್ಕರಣೆ ಪ್ರಕ್ರಿಯೆ ಈ ಸಂಬಂಧ ಬಿಎಂಆರ್ಸಿಎಲ್ ಅಧಿಕಾರಿಗಳು ಮತ್ತು ದರ ಏರಿಕೆ ಸಮಿತಿಯ ಸದಸ್ಯರ ಜೊತೆ ಹೈವೊಲ್ಟೇಜ್ ಸಭೆ ಇಂದು ನಡೆಯಿತು. ಸಭೆಯಲ್ಲಿ ದರ ಏರಿಕೆ, ಜೊತೆಗೆ ಪರಿಷ್ಕೃತ ದರ ನಿಗದಿ ದಿನಾಂಕ ಕೂಡ ಫೈನಲ್ ಮಾಡಲಾಗಿದೆ. ಶನಿವಾರ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಬಿಎಂಆರ್ಸಿಎಲ್ ದರ ಏರಿಕೆ ವಿವರವನ್ನು ಪ್ರಕಟಿಸಲಿದೆ.
Pumpkin Seeds: ಕುಂಬಳಕಾಯಿ ಬೀಜ ತಿಂದ್ರೆ ಈ ಆರೋಗ್ಯ ಸಮಸ್ಯೆಗಳು ಹತ್ತಿರವೂ ಸುಳಿಯಲ್ಲ!
ಕಳೆದ 8 ವರ್ಷದಿಂದ ಮೆಟ್ರೋ ಪ್ರಯಾಣ ದರ ಏರಿಕೆ ಆಗಿರಲಿಲ್ಲ. ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಸಂಬಂಧ ರಚಿಸಿದ್ದ ಸಮಿತಿ ಸಿಂಗಾಪುರ, ಹಾಂಕಾಂಗ್, ದೆಹಲಿಗೆ ತೆರಳಿ ಅಲ್ಲಿನ ಮೆಟ್ರೋ ದರ ಪರಿಷ್ಕರಣೆ ಕ್ರಮ, ದರ ಹೆಚ್ಚಳವನ್ನು ಅಧ್ಯಯನ ಮಾಡಿ ದರ ಪರಿಷ್ಕರಣೆ ವರದಿ ಸಿದ್ಧಪಡಿಸಿದೆ.
2017 ರಲ್ಲಿ 10% -15%ರಷ್ಟು ಮೆಟ್ರೋ ಪ್ರಯಾಣ ದರ ಏರಿಕೆ ಮಾಡಲಾಗಿತ್ತು. ಮುಂದಿನ ದಿನಗಳಲ್ಲಿ ನಮ್ಮ ಮೆಟ್ರೋ ರೈಲು ಮುಂದಿನ ಐದು ವರ್ಷದಲ್ಲಿ 220 ಕಿಮೀ ನಷ್ಟು ವಿಸ್ತರಣೆಯಾಗಲಿದೆ. ಮೆಟ್ರೋ ಕಾಮಗಾರಿಗಾಗಿ ವಿವಿಧ ಬ್ಯಾಂಕ್, ಏಜೆನ್ಸಿಗಳಿಗೆ ಪಾವತಿಸಬೇಕಾದ ಸಾಲದ ಮೇಲಿನ ಬಡ್ಡಿ, ಪ್ರಸ್ತುತ ರೈಲುಗಳ ಕಾರ್ಯಾಚರಣೆ ವೆಚ್ಚ, ನಿರ್ವಹಣೆ ಮತ್ತು ಸಿಬ್ಬಂದಿ ವೇತನ ಮತ್ತಿತರ ವಿವಿಧ ವೆಚ್ಚ ಪ್ರತಿ ವರ್ಷ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ 15%-20% ರಷ್ಟು ದರ ಏರಿಕೆ ಅನಿವಾರ್ಯ ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದರು.