ಬೆಂಗಳೂರು: ಕೊಲೆ ಕೇಸ್ ನಲ್ಲಿ ಆರೋಪಿ ದರ್ಶನ್ ಗೆ ಈಗಾಗಲೇ ಕೋರ್ಟ್ ಜಾಮೀನು ನೀಡಿದೆ. ಆದರೆ ಇದೇ ತಿಂಗಳು 24ರ ನಂತರ ದರ್ಶನ್ ಸೇರಿ 7 ಆರೋಪಿಗಳ ಮುಂದಿನ ಭವಿಷ್ಯ ನಿರ್ಧಾರವಾಗಲಿದೆ. ಅದ್ಯಾವ್ ನಿರ್ಧಾರ ಅಂತೀರಾ ಹೇಳ್ತೀವಿ ನೋಡಿ…
ಯೆಸ್…ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ದರ್ಶನ್ ಹಾಗೂ ಗ್ಯಾಂಗ್ಗೆ ಜಾಮೀನು ಸಿಕ್ಕ ವಿಚಾರ ಈಗ ಸುಪ್ರೀಂ ಕೋರ್ಟ್ ಅಂಗಳದಲ್ಲಿ ಇದೆ. ದರ್ಶನ್ ಗೆ ಜಾಮೀನು ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೊರ್ಟ್ ಗೆ ಮೇಲ್ಮನವಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿ ವಿಚಾರಣೆ ಜನವರಿ 24ರಂದು ನಡೆಯಲಿದ್ದು, ಒಂದೊಮ್ಮೆ ಜಾಮೀನು ರದ್ದಾದರೆ ದರ್ಶನ್ ಮತ್ತೆ ಜೈಲು ಸೇರಬೇಕಾಗುತ್ತದೆ.
Gruha Lakshmi: ಗೃಹಲಕ್ಷ್ಮಿ ಹಣ ನಿಮಗೆ ಇನ್ನೂ ಬಂದಿಲ್ವಾ..? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊಟ್ರು ಗುಡ್ ನ್ಯೂಸ್
ಹೌದು.. ಜೂನ್ 11ರಂದು ಆರೋಪಿ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ರು. ಆ ಬಳಿಕ ಹಲವು ತಿಂಗಳು ಜೈಲು ಸೇರಿದ್ದರು. ಕೆಳಹಂತದ ಕೋರ್ಟ್ನಲ್ಲಿ ದರ್ಶನ್ ಜಾಮೀನು ಅರ್ಜಿ ವಜಾ ಆಗಿತ್ತು. ಆ ಬಳಿಕ ಹೈಕೋರ್ಟ್ನಲ್ಲಿ ಅನಾರೋಗ್ಯದ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದಿದ್ದ ನಟ ನಂತರ ಪೂರ್ಣ ಪ್ರಮಾಣದ ಜಾಮೀನು ಪಡೆದುಕೊಂಡಿದ್ದರು.
ದರ್ಶನ್ ಜೊತೆ ಪವಿತ್ರಾಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್ ಮತ್ತು ಪ್ರದೂಶ್ ಕೂಡ ಜಾಮೀನು ಪಡೆದಿದ್ದಾರೆ. ಸದ್ಯ ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಜನವರಿ 6ರಂದು ಸುಪ್ರೀಂಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈಗ ಅರ್ಜಿ ವಿಚಾರಣೆಗೆ ದಿನಾಂಕ ನಿಗದಿ ಮಾಡಿದ್ರು. ಪೊಲೀಸರು ಮೇಲ್ಮನವಿ ಸಲ್ಲಿಸಿರುವುದರಿಂದ ಏಳು ಆರೋಪಿಗಳಿಗೆ ಮತ್ತೆ ಕಂಟಕ ಶುರುವಾಗಿದೆ. ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಆ್ಯಂಡ್ ಗ್ಯಾಂಗ್ಗೆ ರಿಲೀಫ್ ಸಿಗುತ್ತಾ ನೋಡಬೇಕಿದೆ.
ಹೈಕೋರ್ಟ್ನಲ್ಲಿ ಈ ಮೊದಲು ಸರ್ಕಾರದ ಪರ ವಕೀಲರಾಗಿ ಪ್ರಸನ್ನ ಕುಮಾರ್ ಅವರು ವಾದ ಮಂಡನೆ ಮಾಡಿದ್ದರು. ಸದ್ಯ ಸುಪ್ರೀಂ ಕೋರ್ಟ್ಗೆ ವಕೀಲರಾಗಿ ಅನಿಲ್ ಸಿ. ನಿಶಾನಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಮುಂದೆ ಕೇಸ್ ಯಾವ ಹಂತಕ್ಕೆ ಹೋಗುತ್ತೆ ಎಂಬುದನ್ನು ಕಾದು ನೋಡಬೇಕಿದೆ.