ನೆಲಮಂಗಲ: ಮೂರನೇ ಮಹಡಿಯ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹೊನ್ನಸಂದ್ರ ಗ್ರಾಮದಲ್ಲಿ ಜರುಗಿದೆ.
ಮೆಟ್ರೋ ಪ್ರಯಾಣಿಕರ ಜೇಬಿಗೆ ಕತ್ತರಿ: ನಾಳೆ ಗೊತ್ತಾಗತ್ತೆ ನೂತನ ಟಿಕೆಟ್ ದರ!
ರಾಜ್ ಮಹಮದ್ 32 ಮೃತ ಕಟ್ಟಡ ಕಾರ್ಮಿಕ ಎನ್ನಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಹೊನ್ನಸಂದ್ರ ಗ್ರಾಮದಲ್ಲಿ ರಾಜ್ ಮಹಮದ್ ಮನೆ ಕಟ್ಟಡದ ಕೆಲಸ ಮಾಡುತ್ತಿದ್ದ. ಕಾರ್ಮಿಕ ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕು ಮೂಲದವನು.
ಮೂರನೇ ಮಹಡಿಯಲ್ಲಿ ಕೆಲಸ ಮಾಡುವ ವೇಳೆ ಸ್ಲಿಪ್ ಆಗಿ ಕೆಳಗಡೆ ಬಿದ್ದು ಸಾವನ್ನಪ್ಪಿರುವ ಘಟನೆ ಜರುಗಿದೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.