ಬೆಂಗಳೂರು:- ನಮ್ಮ ಬೆಂಗಳೂರೂರಿನ ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ನಾಳೆ ವ್ಯತ್ಯಯ ಉಂಟಾಗಲಿದೆ.
ನಾಳೆ ಬೆಳಿಗ್ಗೆ 7 ರಿಂದ 10 ಗಂಟೆಯವರೆಗೆ ನಮ್ಮ ಮೆಟ್ರೋದ ನೇರಳೆ ಮಾರ್ಗದ ಕೆಂಪೇಗೌಡ ಮೆಜೆಸ್ಟಿಕ್ ಮತ್ತು ಇಂದಿರಾನಗರ ನಿಲ್ದಾಣಗಳ ನಡುವಿನ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ. ರೋಡ್ ನಡುವೆ ಹಳಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಈ ವ್ಯತ್ಯಯ ಉಂಟಾಗುತ್ತಿದೆ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇಲ್ಲ.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ದಿನಂಕ 19 ರಂದು ಅಂದರೆ ಭಾನುವಾರ ದಂದು ನೇರಳೆ ಮಾರ್ಗದಲ್ಲಿನ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತು ಮೆಟ್ರೋ ನಿಲ್ದಾ ಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಹಾಗಾಗಿ ಕೆಂಪೇಗೌಡ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 07:00 ರಿಂದ 10.00 ರ ವರೆಗೆ ಮೂರು ಗಂಟೆಗಳ ಕಾಲ ಮೆಟ್ರೋ ರೆೈಲು ಸೇವೆ ಇರುವುದಿಲ್ಲ.