ನವದೆಹಲಿ: ಫೆಬ್ರವರಿ 5ರಂದು ದೆಹಲಿ ವಿಧಾನಸಭೆಯ 70 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ‘ವಿಕಸಿತ ದೆಹಲಿ’ ಶೀರ್ಷಿಕೆಯಡಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.
ಮಹಿಳೆಯರಿಗೆ 6 ಪೌಷ್ಠಿಕಾಂಶ ಕಿಟ್ಗಳು, ಗರ್ಭಿಣಿಯರಿಗೆ 21,000 ರೂ. ನೀಡಲಾಗುವುದು. ಅಲ್ಲದೇ ಮಹಿಳಾ ಸಮೃದ್ಧಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೆರವು, 500 ರೂ. ಗೆ ಎಲ್ಪಿಜಿ ಸಿಲಿಂಡರ್ ನೀಡುವುದಾಗಿ ಘೋಷಿಸಿದರು. ಇದರೊಂದಿಗೆ 60-70 ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ 2,500 ರೂ. ಮತ್ತು 70 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾಸಿಕ 3,000 ರೂ. ನೆರವು ನೀಡುವುದಾಗಿ ಘೋಷಿಸಿದ್ದಾರೆ.
ಮಹಿಳೆಯರು ಚಳಿಗಾಲದಲ್ಲಿ ಎಳ್ಳು ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..?
ಅಲ್ಲದೇ ಪಕ್ಷ ಅಧಿಕಾರಕ್ಕೆ ಬಂದರೆ, ಮೊದಲ ಸಂಪುಟ ಸಭೆಯಲ್ಲೇ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಒಪ್ಪಿಗೆ ನೀಡಲಾಗುವುದು ಜೊತೆಗೆ ಹೆಚ್ಚುವರಿಯಾಗಿ ಆರೋಗ್ಯ ರಕ್ಷಣೆಗಾಗಿ 5 ಲಕ್ಷ ರೂ. ನೀಡಲಾಗುವುದು. 500 ರೂ.ಗೆ ಎಲ್ಪಿಜಿ ಸಿಲಿಂಡರ್ ನೀಡುವ ಜೊತೆಗೆ ಹೋಳಿ ಮತ್ತು ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ 1 ಉಚಿತ ಸಿಲಿಂಡರ್ ನೀಡಲಾಗುವುದು ಎಂದು ಗ್ಯಾರಂಟಿ ನೀಡಿದರು.