ಮೈಸೂರು:- ಎಟಿಎಂಗೆ ಹಣ ತುಂಬದೇ ವಂಚಿಸಿದ ಇಬ್ಬರ ವಿರುದ್ಧ FIR ದಾಖಲಾಗಿದೆ. ಎಟಿಎಂಗೆ ಹಣ ತುಂಬದೇ ತೆಗೆದುಕೊಂಡ ಹೋದ ಆರೋಪದಲ್ಲಿ ಅಕ್ಷಯ್ ಕುಮಾರ್ ಹಾಗೂ ತೇಜಸ್ವಿನಿ ವಿರುದ್ಧ ಮೈಸೂರು ಜಿಲ್ಲೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಳೆಗಳ ಪೋಷಕಾಂಶ ಪೂರಣ ತಾಂತ್ರಿಕತೆ: ‘ಮೈಕೊರೈಜಾ’ ಜೈವಿಕ ಗೊಬ್ಬರ ಅಭಿವೃದ್ಧಿ
ಟಿಎಲ್ ಎಂಟರ್ಪ್ರೈಸಸ್ನಲ್ಲಿ ಅಕ್ಷಯ್ ಕೆಲಸ ಮಾಡುತ್ತಿದ್ದ. ಟಿಎಲ್ ಎಂಟರ್ಪ್ರೈಸಸ್, ಎಟಿಎಂಗೆ ಹಣ ತುಂಬುವ ಏಜೆನ್ಸಿ ಪಡೆದಿತ್ತು. ಮೈಸೂರು ಜಿಲ್ಲೆಯ ಒಟ್ಟು 16 ಎಟಿಎಂಗಳಿಗೆ ಅಕ್ಷಯ್ ಹಣ ತುಂಬುತ್ತಿದ್ದ. ಕಂಪನಿ ಪರವಾಗಿ ಹೋಗಿ ಹಣ ತುಂಬುವ ಕೆಲಸ ಮಾಡಿದ್ದ. ಕಂಪನಿ ಆಡಿಟ್ ಮಾಡಿದಾಗ ಹಣದಲ್ಲಿ ವ್ಯತ್ಯಾಸ ಕಂಡುಬಂದಿದೆ.
ಕ್ಯಾಶ್ ಲೋಡಿಂಗ್ ಎಟಿಎಂ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ, ಆಕ್ಷಯ್ ಎಟಿಎಂಗೆ ಹಣ ಹಾಕದೆ ಬ್ಯಾಗ್ನಲ್ಲಿ ತುಂಬಿಕೊಂಡು ಹೋದ ದೃಶ್ಯ ಸೆರೆಯಾಗಿದೆ. ಗದ್ದಿಗೆ ಗ್ರಾಮದ ಎಟಿಎಂನಲ್ಲಿ 5.80 ಲಕ್ಷ ಹಣ ಲೋಡ್ ಮಾಡಿಲ್ಲ. ಈ ಕೃತ್ಯಕ್ಕೆ ಆತನ ಪರಿಚಯದ ತೇಜಸ್ವಿನಿ ಎಂಬಾಕೆಯ ಕುಮ್ಮಕ್ಕು ಆರೋಪ ಕೇಳಿಬಂದಿದೆ. ಇಬ್ಬರೂ ಈ ಹಣದಿಂದ ಚಿನ್ನ ಖರೀದಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ