ಟೆಸ್ಟ್ ಕ್ರಿಕೆಟ್ನಲ್ಲಿ ಟೀಂ ಇಂಡಿಯಾದ ಸತತ ಸೋಲುಗಳಿಂದ ಎಚ್ಚೆತ್ತುಕೊಂಡಿರುವ ಬಿಸಿಸಿಐ ಮಹತ್ವದ ಬದಲಾವಣೆಗಳನ್ನು ಮಾಡಲು ಮುಂದಾಗಿದೆ. ಬಿಸಿಸಿಐ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಪ್ರಮುಖ ಕಾರಣ ನ್ಯೂಜಿಲೆಂಡ್ ವಿರುದ್ಧದ ತವರು ಟೆಸ್ಟ್ ಸರಣಿ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ ಸೋತಿದ್ದು. ಈ ಎರಡೂ ಸರಣಿಗಳಲ್ಲಿ ತಂಡದ ಬ್ಯಾಟಿಂಗ್ ವಿಭಾಗ ಸಂಪೂರ್ಣವಾಗಿ ಹಳಿತಪ್ಪಿತು.
ಅದರ ಪರಿಣಾಮವಾಗಿಯೇ ಟೀಂ ಇಂಡಿಯಾ ಸತತ ಮೂರನೇ ಬಾರಿಗೆ ಡಬ್ಲ್ಯುಟಿಸಿ ಫೈನಲ್ಗೆ ಟಿಕೆಟ್ ಪಡೆಯಲು ವಿಫಲವಾಯಿತು. ಹೀಗಾಗಿ ಇತ್ತೀಚೆಗಷ್ಟೇ ವಿದೇಶ ಪ್ರವಾಸಗಳಿಗೆ ಪತ್ನಿ ಮತ್ತು ಕುಟುಂಬಸ್ಥರನ್ನು ಕರೆದೊಯ್ಯುವಂತಿಲ್ಲ ಎಂಬ ಕಟ್ಟುನಿಟ್ಟಿನ ನಿಯಮವನ್ನ ಬಿಸಿಸಿಐ ಜಾರಿಗೊಳಿಸಿತು.
ಮಹಿಳೆಯರು ಚಳಿಗಾಲದಲ್ಲಿ ಎಳ್ಳು ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..?
ಇದೀಗ ಆಟಗಾರರು ವಿದೇಶಿ ಪ್ರವಾಸಕ್ಕೆ ತಮ್ಮ ವೈಯಕ್ತಿಕ ಅಡುಗೆಯವರು, ಕೇಶ ವಿನ್ಯಾಸಕರು, ಸ್ಟೈಲಿಸ್ಟ್ ಮತ್ತು ವೈಯಕ್ತಿಕ ಭದ್ರತಾ ಸಿಬ್ಬಂದಿಯನ್ನ ಕರೆದೊಯ್ಯುವಂತಿಲ್ಲ ಎಂಬ ನಿಯಮವನ್ನು ಜಾರಿಗೋಳಿಸಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಹೌದು ಇಡೀ ಪ್ರವಾಸದಲ್ಲಿ ಭಾರತ ತಂಡದ ಆಟಗಾರರು ತಮ್ಮ ಪತ್ನಿಯರು ಮತ್ತು ಕುಟುಂಬ ಸದಸ್ಯರೊಂದಿಗೆ ಪ್ರಯಾಣಿಸಲು ಸಾಧ್ಯವಾಗುವುದಿಲ್ಲ. ಪಂದ್ಯಾವಳಿ ಅಥವಾ ಸರಣಿಯು 45 ದಿನಗಳಿಗಿಂತ ಹೆಚ್ಚು ಕಾಲ ಇದ್ದರೆ, ಪತ್ನಿ ಅಥವಾ ಕುಟುಂಬವು ಆಟಗಾರನೊಂದಿಗೆ 14 ದಿನಗಳವರೆಗೆ ಮಾತ್ರ ಉಳಿಯಬಹುದು. ಸಣ್ಣ ಪ್ರವಾಸಗಳಿಗೆ ಈ ಮಿತಿಯು ಕೇವಲ ಏಳು ದಿನಗಳವರೆಗೆ ಇರುತ್ತದೆ.
ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ, ಟಿ20 ವಿಶ್ವಕಪ್ ಟೂರ್ನಿಗಳನ್ನು ಗಮನದಲ್ಲಿಟ್ಟುಕೊಂಡು ಆಟಗಾರರಲ್ಲಿ ಶಿಸ್ತು ತರಲು ಹಾಗೂ ಉತ್ತಮ ಪ್ರದರ್ಶನ ನೀಡುವಂತೆ ಮಾಡಲು ಈ ಕಠಿಣ ನಿಯಮ ಜಾರಿಗೊಳಿಸಿದೆ. ಇದರೊಂದಿಗೆ ಆಟಗಾರರ ಫಿಟ್ನೆಸ್ ಬಗ್ಗೆಯೂ ಬಿಸಿಸಿಐ ನಿಗಾ ವಹಿಸಿದೆ ಎಂದು ಹೇಳಲಾಗುತ್ತಿದೆ.