ಬೆಂಗಳೂರು: ಕಚ್ಚಾ ತೈಲಗಳಾದ ಪೆಟ್ರೋಲ್ ಡೀಸೆಲ್ ಕೂಡ ಬೆಲೆಗಳಲ್ಲಿ ಏರಿಳಿತಕ್ಕೊಳಗಾಗುತ್ತಿದ್ದು, ದಿನಂಪ್ರತಿ ಬಳಕೆಯಾಗುವ ಈ ಇಂಧನಗಳು ಒಮ್ಮೊಮ್ಮೆ ಬೆಲೆ ಏರಿಸಿಕೊಂಡಿರುವುದು ವಾಹನ ಚಾಲಕರಿಗೆ ತಲೆನೋವಿನ ಸಮಸ್ಯೆಯಾಗಿದೆ. ನವೀಕರಿಸಲಾಗದೇ ಇರುವ ಇಂಧನಗಳಾಗಿ ಗುರುತಿಸಿಕೊಂಡಿರುವ ಪೆಟ್ರೋಲ್, ಡೀಸೆಲ್ ಅನ್ನು ಹಲವಾರು ಪ್ರಕ್ರಿಯೆಗಳ ಮೂಲಕ ಶುದ್ಧೀಕರಿಸಿ ಬಳಕೆಗೆ ಲಭ್ಯವಾಗಿಸಲಾಗುತ್ತದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಪ್ರತಿ ಲೀಟರ್ಗೆ 87.62 ರೂ., ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 104.21 ರೂ ಮತ್ತು ಡೀಸೆಲ್ ಬೆಲೆ 92.15 ರೂ., ಅದೇ ಸಮಯದಲ್ಲಿ, ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 103.94 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 90.76 ರೂ., ಇದಲ್ಲದೇ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.75 ರೂ. ಮತ್ತು ಡೀಸೆಲ್ ಬೆಲೆ ಲೀಟರ್ಗೆ 92.34 ರೂ. ಇದೆ.
ಮಹಿಳೆಯರು ಚಳಿಗಾಲದಲ್ಲಿ ಎಳ್ಳು ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..?
ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 94.87 ರೂ ಮತ್ತು ಡೀಸೆಲ್ ಲೀಟರ್ಗೆ 88.01 ರೂ., ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 102.86 ರೂ. ಮತ್ತು ಡೀಸೆಲ್ ದರ ಲೀಟರ್ಗೆ 88.94 ರೂ., ಗುರುಗ್ರಾಮದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 95.19 ರೂ., ಡೀಸೆಲ್ 88.05 ರೂ., ಲಕ್ನೋದಲ್ಲಿ ಪೆಟ್ರೋಲ್ ಲೀಟರ್ಗೆ 94.65 ರೂ ಮತ್ತು ಡೀಸೆಲ್ ಲೀಟರ್ಗೆ 87.76 ರೂ., ಹೈದರಾಬಾದ್ನಲ್ಲಿ ಪೆಟ್ರೋಲ್ ಲೀಟರ್ಗೆ 107.41 ರೂ ಮತ್ತು ಡೀಸೆಲ್ ಲೀಟರ್ಗೆ 95.65 ರೂ. ಇದೆ.
ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 94.24 ರೂ., ಡೀಸೆಲ್ 82.40 ರೂ., ಜೈಪುರದಲ್ಲಿ ಪೆಟ್ರೋಲ್ ಲೀಟರ್ಗೆ 104.88 ರೂ ಮತ್ತು ಡೀಸೆಲ್ ಲೀಟರ್ಗೆ 90.36 ರೂ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 105.18 ರೂ., ಡೀಸೆಲ್ ಲೀಟರ್ ಗೆ 92.04 ರೂ.ಗೆ ಮಾರಾಟ ಮಾಡಲಾಗುತ್ತಿದೆ.