ಬಳ್ಳಾರಿ : ಉಗ್ರಾಣ ನಿಗಮ ಮಂಡಳಿ ಕೇಂದ್ರಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ದಿಢೀರ್ ಭೇಟಿ ನೀಡಿದ್ದಾರೆ. ನಗರದ ಬಂಡಿಮೋಟ ಬಳಿಯ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಮಂಡಳಿ ಘಟಕ-2 ಕೇಂದ್ರಕ್ಕೆ, ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಅವರು ಅನಿರೀಕ್ಷಿತ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಈ ವೇಳೆ ಉಗ್ರಾಣದಲ್ಲಿ ಸ್ವಚ್ಛತೆ ಹಾಗೂ ಸರಿಯಾದ ನಿರ್ವಹಣೆ ಇಲ್ಲ ಎಂದು ಕೆಂಡಾಮಂಡಲರಾಗಿದ್ದಾರೆ.
ಬೆಳೆಗಳ ಪೋಷಕಾಂಶ ಪೂರಣ ತಾಂತ್ರಿಕತೆ: ‘ಮೈಕೊರೈಜಾ’ ಜೈವಿಕ ಗೊಬ್ಬರ ಅಭಿವೃದ್ಧಿ
ಉಗ್ರಾಣದಲ್ಲಿ ಸುಮಾರು 48 ಸಾವಿರ ಜೋಳದ ಚೀಲಗಳು (24 ಸಾವಿರ ಕ್ವಿಂಟಾಲ್) ಹುಳ ಹಿಡಿದ ಸ್ಥಿತಿಯಲ್ಲಿವೆ. ಸುಮಾರು 7 ಕೋಟಿ 20 ಲಕ್ಷ ಮೌಲ್ಯದ ಜೋಳ ಹುಳುಗಳ ಪಾಲಾಗಿದೆ. ನಿಮ್ಮ ಬೇಜವಾಬ್ದಾರಿತನದಿಂದ ಬಡ ಜನರು ಸೇವಿಸುವ ಆಹಾರ ನಷ್ಟವಾಗಿದೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಮಂಡಳಿ ಘಟಕ-2 ಕೇಂದ್ರದ ಅಧಿಕಾರಿ ಶರಾವತಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನಾ ಅವರನ್ನು ಇಬ್ಬರ ವಿರುದ್ಧ ಕರ್ತವ್ಯ ಲೋಪದಡಿ ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡರು.