ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ನಡೆದ ಹಲ್ಲೆ ನಡೆಸಿದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 30 ಗಂಟೆಯಲ್ಲಿ ಮೊದಲ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಇದೀಗ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಈಗಾಗಲೇ ಆರೋಪಿಯ ಬಂಧನ ಆಗಿದೆ ಎಂಬ ಸುದ್ದಿ ಹರಿದಾಡಿತ್ತು, ಆದರೆ ಮುಂಬೈ ಪೊಲೀಸರು ಅದನ್ನು ತಳ್ಳಿ ಹಾಕಿದ್ದು, ಯಾರನ್ನೂ ಬಂಧಿಸಲಾಗಿಲ್ಲ ಎಂದಿದ್ದರು. ಇದೀಗ ಮಧ್ಯ ಪ್ರದೇಶದಲ್ಲಿ ಆರೋಪಿಯ ಬಂಧನ ಆಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದ ವ್ಯಕ್ತಿಯನ್ನೇ ಬಂಧಿಸಲಾಗಿದೆಯೇ ಅಥವಾ ದಾಳಿಕೋರನಿಗೆ ಸಂಬಂಧಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆಯೇ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ.
ಈ ಹಿಂದೆ ಛತ್ತೀಸ್ಘಡದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂಬ ಸುದ್ದಿ ಹರಡಿತ್ತು, ಆರೋಪಿ ಎಂದು ಹೇಳಲಾದ ವ್ಯಕ್ತಿಯ ಚಿತ್ರ ಸಹ ಹರಿದಾಡಿತ್ತು. ಆದರೆ ಆ ನಂತರ ಮುಂಬೈ ಪೊಲೀಸರು, ತಾವು ಯಾರನ್ನೂ ಬಂಧಿಸಿಲ್ಲ ಎಂದರು. ಇದೀಗ ಮತ್ತೊಂದು ಸುದ್ದಿ ಹರಿದಾಡುತ್ತಿದ್ದು, ಮಧ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಆದರೆ ಮಧ್ಯ ಪ್ರದೇಶದಲ್ಲಿ ಬಂಧಿಸಲಾಗಿರುವ ವ್ಯಕ್ತಿ ಆರೋಪಿಯೇ ಎಂಬ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಇಲ್ಲ.
ಗುರುವಾರ ತಡರಾತ್ರಿ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ಅಗಂತುಕನೊಬ್ಬ ಸೈಫ್ ಅಲಿ ಖಾನ್ ಮೇಲೆ ಚಾಕೂವಿನಿಂದ ದಾಳಿ ಮಾಡಿದ್ದ. ಆರು ಬಾರಿ ಸೈಫ್ ಅಲಿ ಖಾನ್ಗೆ ಚುಚ್ಚಿ ಪರಾರಿಯಾಗಿದ್ದ. ಸೈಫ್ ಅಲಿ ಖಾನ್ ಪ್ರಸ್ತುತ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೈಫ್ ಅಲಿ ಖಾನ್ ಬೆನ್ನಿನಲ್ಲಿ ಮೂರು ಇಂಚಿನ ಚಾಕು ಸೇರಿಕೊಂಡಿತ್ತು, ಅದನ್ನೂ ಸಹ ವೈದ್ಯರು ತೆಗೆದಿದ್ದಾರೆ. ಸೈಫ್ ಅಲಿ ಖಾನ್ ಪ್ರಕರಣದ ತನಿಖೆಗೆ ಏಳು ತಂಡಗಳನ್ನು ರಚಿಸಲಾಗಿದ್ದು ಆರೋಪಿಯ ಹುಡುಕಾಟದಲ್ಲಿ ಪೊಲೀಸರು ತೊಡಗಿಕೊಂಡಿದ್ದಾರೆ.