ಬೆಳಗಾವಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಳಗಾವಿಯ ಕಪಿಲೇಶ್ವರ ಮಂದಿರಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯಲಿರುವ ಗಾಂಧಿ ಭಾರತ ಸಮಾವೇಶ ಕಾರ್ಯಕ್ರಮಕ್ಕೆ ಆಗಮಿಸಿರುವ ಡಿಕೆಶಿ, ಕಪಿಲೇಶ್ವರ ಮಂದಿರದಲ್ಲಿ ಶಿವನ ಮೂರ್ತಿಗೆ ಪಂಚಾಮೃತ ಅಭಿಶೇಷ ಮಾಡಿ, ಪೂಜೆ ಸಲ್ಲಿಸಿದರಿ. ಬೆಳಗಾವಿಯಲ್ಲಿ ನಡೆಯುವ ಗಾಂಧಿ ಭಾರತ ಕಾರ್ಯಕ್ರಮ ಯಾವ ಅಡಚನೆ ಇಲ್ಲದೆ ನಡೆಯಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.
ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಸ್ವಾತಂತ್ರ್ಯ ಹೋರಾಟಗಾರರಿಗೆ ಆಹ್ವಾನ ; ಡಿಸಿಎಂ ಡಿಕೆಶಿ
ಮಹಾತ್ಮ ಗಾಂಧಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಸಮಾವೇಶಕ್ಕೆ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಎಂಬ ರಾಷ್ಟ್ರಮಟ್ಟದ ಸಮಾವೇಶ ಆರಂಭಿಸಿದೆ. ಇದೇ ವೇಳೆ ಗಾಂಧಿ ಪ್ರತಿಮೆ ಕೂಡ ಅನಾವರಣಗೊಳಿಸಲಿದೆ. ಜನವರಿ 21 ರಂದು ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಸಕಲ ಸಿದ್ದತೆಯೂ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.