ವಿಜಯಪುರ:- ಯಡಿಯೂರಪ್ಪನಿಗೆ ಮನೇಲಿ ವಿಜಯೇಂದ್ರ ಮುದಿಯಾ ಅಂತಾನೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಬಿಜೆಪಿ ಬಣ ಬಡಿದಾಟಕ್ಕೆ ಸಿಕ್ತು ಹೊಸ ಟ್ವಿಸ್ಟ್: ರಾಜೀನಾಮೆಗೆ ಮುಂದಾದ ಮಾಜಿ ಸಚಿವ!
ಈ ಸಂಬಂಧ ಮಾತನಾಡಿದ ಅವರು, ಯಡಿಯೂರಪ್ಪಗೆ ಮನೆಯಲ್ಲಿ ಕಿಮ್ಮತ್ತಿಲ್ಲ, ವಿಜಯೇಂದ್ರ ಹೊರಗಡೆ ಪೂಜ್ಯ ತಂದೆ, ಮನೆಯಲ್ಲಿ ಮುದಿಯಾ ಎಂದು ಕರೆಯುತ್ತಾನೆ ಎಂದರು.
ವಿಜಯೇಂದ್ರ ಮಾಡಿದ ತಪ್ಪಿನಿಂದಲೇ ಯಡಿಯೂರಪ್ಪ ಜೈಲಿಗೆ ಹೋದದ್ದು, ಅವನಿಂದಲೇ ಹಾಳಾಗಿದ್ದು, ಮೊದಲು ಮಗನ ವ್ಯಾಮೋಹ ಬಿಡಲಿ. ಯಡಿಯೂರಪ್ಪಗೆ ಮನೆಯಲ್ಲಿ ಕಿಮ್ಮತ್ತಿಲ್ಲ. ಹೊರಗಡೆ ಪೂಜ್ಯ ತಂದೆ, ಮನೆಯಲ್ಲಿ ಮುದಿಯಾ ಎಂದು ಕರೆಯುತ್ತಾನೆ. ಯಡಿಯೂರಪ್ಪ ಕೂಡ ಎಷ್ಟು ಜನರಿಗೆ ಮೋಸ ಮಾಡಿಲ್ಲ. ಬಿಬಿ ಶಿವಪ್ಪ, ಮಲ್ಲಿಕಾರ್ಜುನಯ್ಯ ಅವರಿಗೆ ಅನ್ಯಾಯ ಮಾಡಿದ್ದಾನೆ. ತಮ್ಮ ಸ್ವಾರ್ಥಕ್ಕಾಗಿ ಅನೇಕರನ್ನು ಮಣ್ಣಲ್ಲಿ ಇಟ್ಟಿದ್ದಾರೆ. ಸುಮ್ಮನೇ ಮೊಮ್ಮಕ್ಕಳ ಜೊತೆ ಆಟ ಆಡುತ್ತಾ ಕೂಡಲಿ ಎಂದು ವಾಗ್ದಾಳಿ ನಡೆಸಿದರು.
ನಮ್ಮ ವಿರುದ್ಧ ಎರಡು ಹಂದಿಗಳು ಬಿಟ್ಟರೆ ಬೇರೆ ಯಾರೂ ಮಾತನಾಡಲ್ಲ. ಆ ಹಂದಿಗಳಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ವಿಜಯೇಂದ್ರ ಪರ ಹೊಗಳು ಭಟರು ಮಾತ್ರ ಮಾತನಾಡುತ್ತಾರೆ ಎಂದು ವ್ಯಂಗ್ಯವಾಡಿದರು.