ಕೊಪ್ಪಳ: ಬಂಕಾಪುರಧಾಮದಲ್ಲಿ ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ. ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು ಸ್ವಚ್ಛಂದವಾಗಿ ವಿಹರಿಸುತ್ತಿದ್ದು, ಇತ್ತೀಚಿಗೆ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ.
ಸಫಾರಿ ವೇಳೆ ಪ್ರವಾಸಿಗರನ್ನು ಅಟ್ಟಾಡಿಸಿದ ಒಂಟಿ ಸಲಗ : ಪ್ರವಾಸಿಗರು ಬಚಾವ್
ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿ ಸುಮಾರು 332 ಹೆಕ್ಟರ್ ಪ್ರದೇಶದಲ್ಲಿರುವ ಬಂಕಾಪೂರ ತೋಳ ಧಾಮವು ಕುರುಚಲು ಅರಣ್ಯದೊಳಗೆ ಗುಡ್ಡಗಳು, ಸ್ವಾಭಾವಿಕ ಗುಹೆಗಳನ್ನೂ ಹೊಂದಿದ್ದು, ತೋಳ, ಚಿರತೆ, ನವಿಲು, ಕತ್ತೆಕಿರುಬ, ನರಿ, ಮೊಲ, ಮುಳ್ಳುಹಂದಿಯೇ ಮೊದಲಾದ ಹಲವು ವನ್ಯಜೀವಿಗಳ ತಾಣವಾಗಿದೆ. ಇಂಡಿಯನ್ ಗ್ರೇ ಉಲ್ಫ್ ಎಂಬ ಪ್ರಭೇದದ ತೋಳಗಳು ಈ ಸಂರಕ್ಷಿತ ಪ್ರದೇಶದಲ್ಲಿದ್ದು, ಇತ್ತೀಚೆಗೆ 8 ಮರಿಗಳಿಗೆ ಒಂದು ತೋಳ ಜನ್ಮ ನೀಡಿದೆ. ಇವುಗಳ ಪೈಕಿ ಸಾಮಾನ್ಯವಾಗಿ ಪ್ರತಿಶತ 50ರಷ್ಟು ಮರಿಗಳು ಮಾತ್ರ ಬದುಕುಳಿಯುವ ಸಾಧ್ಯತೆ ಇರುತ್ತದೆ, ಆದರೆ ಎಲ್ಲ ತೋಳದ ಮರಿಗಳನ್ನೂ ಉಳಿಸಲು ಅರಣ್ಯಾಧಿಕಾರಿಗಳು ಕ್ರಮವಹಿಸಿದ್ದಾರೆ. ಈ ಪ್ರದೇಶವನ್ನು ತೋಳವನ್ಯಧಾಮ ಎಂದು 15ನೇ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಘೋಷಿಸಲಾಗಿದ್ದು, ಸಂಪುಟ ಉಪಸಮಿತಿ ಸಭೆಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಗೂ ನಿರ್ಣಯಿಸಲಾಗಿದೆ. ಮರಿಗಳೂ ಸೇರಿ ಸುಮಾರು 35-40 ತೋಳಗಳಿವೆ. ಇವುಗಳ ಸುರಕ್ಷತೆಗೆ ಕ್ರಮ ವಹಿಸಲಾಗಿದೆ. ಹುಲ್ಲುಗಾವಲಿನ ಹುಲಿ ಎಂದೇ ಕರೆಯಲಾಗುವ ಈ ಈ ತೋಳಗಳ ಅಧ್ಯಯನಕ್ಕೆ ದೇಶ ವಿದೇಶಗಳಿಂದ ಆಗಮಿಸುತ್ತಾರೆ ಇವುಗಳ ಸಂರಕ್ಷಣೆ ಬಹಳ ಅವಶ್ಯಕತೆಯಿದೆ.