ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಇಬ್ಬರಿಗೆ ಮಂಗನ ಕಾಯಿಲೆ ಸೋಂಕು ತಗುಲಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಎನ್ಆರ್ ಪುರ ತಾಲೂಕಿನ ಮೇಲ್ಪಾಲ್ ಸಮೀಪದ ಕರ್ಕೇಶ್ವರ ಗ್ರಾಮದ 46 ವರ್ಷದ ವ್ಯಕ್ತಿ ಹಾಗೂ ಚಿಕ್ಕಮಗಳೂರು ತಾಲೂಕಿನ ಕಡಬಗೆರೆ ಸಮೀಪದ ಹಳ್ಳಿಯ 25 ವರ್ಷದ ಯುವಕನಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡಿದೆ. ಇಬ್ಬರಿಗೂ ಜೀವಕ್ಕೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
8 ಮರಿಗಳಿಗೆ ಜನ್ಮ ನೀಡಿದ ತೋಳ : ಮರಿಗಳ ರಕ್ಷಣೆಗೆ ಕ್ರಮವಹಿಸಿದ ಅರಣ್ಯ ಇಲಾಖೆ
ಕಾಫಿ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರಲ್ಲಿ ಹೆಚ್ಚಾಗಿ ಕೆಎಫ್ಡಿ ಕಾಣಿಸಿಕೊಳ್ಳಲಿದೆ. ಇದು ಮಾರಣಾಂತಿಕ ವೈರಸ್ ಅಲ್ಲದಿದ್ದರೂ, ಆರೋಗ್ಯದ ಬಗ್ಗೆ ನಿಗಾ ವಹಿಸದಿದ್ದರೆ ತೀವ್ರತನವಾದ ಅನಾರೋಗ್ಯ ಎದುರಿಸುವ ಸಂದರ್ಭ ಬರಬಹುದು ಅಂತಾರೆ ತಜ್ಞರು.