ಶಿವಮೊಗ್ಗ:- ಮೂಕ ಪ್ರಾಣಿ ಮೇಲೆ ಇತ್ತೀಚೆಗೆ ಕ್ರೌರ್ಯ ಹೆಚ್ಚಾಗುತ್ತಿದೆ. ನಾಯಿ ಕೊಂದು ಆಟೋಗೆ ಕಟ್ಟಿ ವ್ಯಕ್ತಿ ಎಳೆದೊಯ್ದ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಸಮೀಪದ ಕೆಂಚನಾಲ ಗ್ರಾಮದ ರೈಲ್ವೇ ನಿಲ್ದಾಣದ ಬಳಿಯಲ್ಲಿ ಜರುಗಿದೆ.
Breaking: ಇಂದು ಶ್ರೀರಂಗಪಟ್ಟಣ ಬಂದ್: ವಕ್ಫ್ ವಿರುದ್ಧ ಸಮರ ಸಾರಿದ ರೈತರು!
ಆಟೋ ಚಾಲಕ ವಾಜೀದ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸದ್ಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.ಕೆಂಚನಾಲ ರೈಲ್ವೆ ನಿಲ್ದಾಣದ ಬಳಿಯಲ್ಲಿ ಅದರಷ್ಟಕ್ಕೆ ಮಲಗಿದ್ದ ನಾಯಿಯ ಮೇಲೆ ಆರೋಪಿ ವಾಜೀದ್ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕುತ್ತಾನೆ. ಆಗ ನಾಯಿ ಕಿರುಚುತ್ತಾ ಅಲ್ಲೇ ಕುಸಿದು ಬೀಳುತ್ತದೆ. ಅಷ್ಟಕ್ಕೇ ಸುಮ್ಮನಾಗದ ಆರೋಪಿ ಮತ್ತೊಮ್ಮೆ ಅದೇ ಕಲ್ಲನ್ನು ಎತ್ತಿ ತಲೆ ಮೇಲೆ ಹಾಕಿದ್ದಾನೆ. ಇದರಿಂದ ಅರ್ಧ ಜೀವವಾದ ನಾಯಿ ಅಲ್ಲೇ ನರಳಾಡುತ್ತಿರುತ್ತದೆ. ಅಲ್ಲಿಂದ ಸ್ವಲ್ಪ ದೂರಕ್ಕೆ ಹೋದ ಆರೋಪಿ ಮತ್ತೊಮ್ಮೆ ಹಿಂದಿರುಗಿ ಬಂದು ಇನ್ನಷ್ಟೂ ಕ್ರೂರವಾಗಿ ಅದೇ ಕಲ್ಲನ್ನು ಮತ್ತೆ ನಾಯಿಯ ತಲೆ ಮೇಲೆ ಹಾಕಿದ ರಭಸಕ್ಕೆ ನಾಯಿ ಸ್ಥಳದಲ್ಲಿಯೇ ಪ್ರಾಣಬಿಟ್ಟಿದೆ.