ಬೆಂಗಳೂರು:- ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಜಾತಿ ಗಣತಿ ನಕಲಿ: ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್ಐಆರ್ ದಾಖಲು!
ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಮಳೆಯಾಗಲಿದೆ.
ವಿಜಯನಗರ, ಶಿವಮೊಗ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಮುಂದುವರೆಯಲಿದೆ. ರಾಜ್ಯಾದ್ಯಂತ ಮೋಡಕವಿದ ವಾತಾವರಣವಿದ್ದ ಕಾರಣ ಚಳಿಯ ಪ್ರಮಾಣ ಕಡಿಮೆಯಾಗಿದೆ. ಬೀದರ್ನಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ, ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಕೆಲವೆಡೆ ಮಂಜು ಕವಿದ ವಾತಾವರಣವಿತ್ತು. ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಭಾನುವಾರ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿತ್ತು.