ಬೆಂಗಳೂರು:- ಮೆಟ್ರೋ ಟಿಕೆಟ್ ದರ ಏರಿಕೆ ಮುಂದಿನ ವಾರದಿಂದ ಬಹುತೇಕ ಖಚಿತ ಎನ್ನಲಾಗಿದೆ.
ಬಿಗ್ ಬಾಸ್ ಸ್ಪರ್ಧಿ ರಜತ್ ಗೆ ಬಿಗ್ ಶಾಕ್: ಮಾಜಿ ಗೆಳತಿಯ ಫೋಟೋ ವೈರಲ್, ಠಾಣೆ ಮೆಟ್ಟಿಲೇರಿದ ಹೆಂಡ್ತಿ!
ಮೆಟ್ರೋ ಟಿಕೆಟ್ ದರವನ್ನು ಶೇ 43ರಷ್ಟು ಹೆಚ್ಚಿಸಲು ಚಿಂತನೆ ನಡೆಸಿರುವುದಾಗಿ ಬಿಎಂಆರ್ಸಿಎಲ್ ಈಗಾಗಲೇ ಪ್ರಕಟಿಸಿದ್ದು, ಪ್ರಯಾಣಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆದರೆ, ದರ ಹೆಚ್ಚಳ ಸಂಬಂಧ ಈವರೆಗೆ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.
ಟಿಕೆಟ್ ದರ ಹೆಚ್ಚಳದ ಸಂಬಂದ ಬಿಎಂಆರ್ಸಿಎಲ್ ಶುಕ್ರವಾರ ಸಭೆ ನಡೆಸಿತ್ತು. ನಂತರ, ದರ ಹೆಚ್ಚಳಕ್ಕೆ ತೀರ್ಮಾನಿಸಿರುವುದಾಗಿ ಶನಿವಾರ ಹೇಳಿತ್ತು. ಆದರೆ, ಅಧಿಕೃತ ಆದೇಶ ಹೊರಡಿಸಿಲ್ಲ.
ಮೆಟ್ರೋ ಟಿಕೆಟ್ ದರ ಏರಿಕೆ ಸಂಬಂಧ ಈವರೆಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಮುಂದಿನ ವಾರದಲ್ಲಿ ನಿರ್ಧಾರ ಪ್ರಕಟವಾಗಬಹುದು ಮತ್ತು ತಕ್ಷಣದಿಂದಲೇ ಜಾರಿಗೆ ಬರಬಹುದು. ಶೇ 40 ರಿಂದ 43 ರಷ್ಟು ದರ ಹೆಚ್ಚಳಕ್ಕೆ ಜನರಿಂದ ತೀವ್ರ ವಿರೋಧ ವ್ಯಕ್ತ ವಾಗಿದ್ದರಿಂದ ಹಚ್ಚಳದ ಪ್ರಮಾಣವನ್ನು ಪರಿಷ್ಕರಿಸಲಾಗುವುದು ಎಂದು ಬಿಎಂಆರ್ಸಿಎಲ್ ಮೂಲಗಳು ತಿಳಿಸಿವೆ.