ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಂಗ್ಲಾದೇಶದ ಆಲ್ರೌಂಡರ್ ಮತ್ತು ರಾಜಕಾರಣಿ ಶಕೀಬ್ ಅಲ್ ಹಸನ್ ವಿರುದ್ಧ ಢಾಕಾದ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಲಾಗಿದೆ. ಹೌದು ಡಿಸೆಂಬರ್ 15ರಂದು ಚೆಕ್ ವಂಚನೆ ಪ್ರಕರಣದಲ್ಲಿ ಶಾಕಿಬ್ ಹೆಸರು ಕೇಳಿ ಬಂದಿತ್ತು.
ಇದಾದ ಬಳಿಕ ಡಿ.18ರಂದು ಪ್ರಾಥಮಿಕ ವಿಚಾರಣೆ ನಡೆದ ನಂತರ ಜನವರಿ 19ರಂದು ವಿಚಾರಣಗೆ ಹಾಜರಾಗುವಂತೆ ನ್ಯಾಯಾಲಯ ಆದೇಶಿಸಿತ್ತು. ಈ ಪ್ರಕರಣದಲ್ಲಿ ಶಕೀಬ್ ಅಲ್ಲದೆ ಅವರ ಒಡೆತನದ ಕಂಪನಿ ಅಲ್ ಹಸನ್ ಆಗ್ರೋ ಫಾರ್ಮ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಘಾಜಿ ಶಹಗೀರ್ ಹುಸೇನ್ ಮತ್ತು ನಿರ್ದೇಶಕರಾದ ಇಮ್ದಾದುಲ್ ಹಕ್ ಮತ್ತು ಮಲೈಕರ್ ಬೇಗಂ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ.
IT ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 40,000 ಫ್ರೆಶರ್ʼಗಳ ನೇಮಕದ ಚಿಂತನೆಯಲ್ಲಿದೆ TCS
ಐಎಫ್ಐಸಿ ಬ್ಯಾಂಕ್ನ ಅಧಿಕಾರಿ ಶಾಹಿಬುರ್ ರೆಹಮಾನ್ ಅವರು ಬ್ಯಾಂಕ್ ಪರವಾಗಿ ಪ್ರಕರಣ ದಾಖಲಿಸಿದ್ದರು. ಅದರ ಪ್ರಕಾರ, ಶಕೀಬ್ ಅಲ್ ಹಸನ್ ಮತ್ತು ಇತರ ಮೂವರು ಎರಡು ಪ್ರತ್ಯೇಕ ಚೆಕ್ಗಳ ಮೂಲಕ ಸರಿಸುಮಾರು 41.4 ಮಿಲಿಯನ್ ಟಾಕಾ ಅಂದರೆ ಸರಿಸುಮಾರು 3 ಕೋಟಿ ಭಾರತೀಯ ರೂಪಾಯಿಗಳನ್ನು ಪಾವತಿಸಬೇಕಾಗಿತ್ತು. ಆದರೆ ಇದುವರೆಗೂ ಹಣ ಪಾವತಿಯಾಗಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ.