ಬೆಂಗಳೂರು: ಗೃಹ ಇಲಾಖೆಯಿಂದ ಬ್ಯಾಂಕ್ ಮತ್ತು ATM ಗಳಿಗೆ ಹೊಸ ರೂಲ್ಸ್ ಕೊಟ್ಡಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈಗಾಗಲೇ ಗೃಹ ಇಲಾಖೆಯಿಂದ ಬ್ಯಾಂಕ್ ಮತ್ತು ATM ಗಳಿಗೆ ಯಾವ ರೀತಿ ಭದ್ರತೆ ಇರಬೇಕು ಅಂತ ರೂಲ್ಸ್ ಕೊಟ್ಡಿದ್ದೇವೆ. ಎಲ್ಲಾ ATM, ಬ್ಯಾಂಕ್ ಗಳಿಗೆ ಸೂಚನೆ ಹೋಗುತ್ತದೆ.
ATMಗೆ ಹಣ ಹಾಕೋಕೆ ಬ್ಯಾಂಕ್ ನವರು ಕಾಂಟ್ರಾಕ್ಟ್ ಅವರಿಗೆ ಕೊಟ್ಟಿರುತ್ತಾರೆ. ATMಗೆ ಹಣ ತುಂಬುವಾಗ ಕಡ್ಡಾಯವಾಗಿ ಆರ್ಮ್ ಕಾರ್ಡ್ ಇರಬೇಕು ಅಂತ ನಿಯಮ ಈಗಾಗಲೇ ಇದೆ.
ಬೀದರ್ ಘಟನೆ ಆದಾಗ ಆರ್ಮ್ ಗಾರ್ಡ್ ಇರಲಿಲ್ಲ. ಹೀಗಾಗಿ ಘಟನೆ ಆಗಿದೆ. ಮಂಗಳೂರು ಬ್ಯಾಂಕ್ ದರೋಡೆಯಾದಾಗಲು ಕೂಡಾ ಗಾರ್ಡ್ ಇರಲಿಲ್ಲ ಅಂತ ಮಾಹಿತಿ ಇದೆ. ಹೀಗಾಗಿ ಇಲಾಖೆ ಕೊಟ್ಟ ರೂಲ್ಸ್ಗಳು ಲ್ಯಾಪ್ಸ್ ಆಗಬಾರದು. ಇಂತಹ ಅವಕಾಶಗಳಿಗೆ ಅಕ್ರಮ ಮಾಡೋರು ಕಾಯ್ತಾ ಇರುತ್ತಾರೆ. ಹೀಗಾಗಿ ಬ್ಯಾಂಕ್ನವರು ನಮ್ಮ ಜೊತೆ ಸಹಕಾರ ಕೊಡಬೇಕು ಅಂತ ತಿಳಿಸಿದರು.