ತುಮಕೂರು : ಮನೆಯ ನೀರಿನ ತೊಟ್ಟಿಗೆ ಬಿದ್ದು ಮಗು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ ಹೊಸಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಅಂಗಡಿ ಮಂಜಣ್ಣನವರ ಪುತ್ರ ಕುಶಾಲ್ 3 ಮೃತ ಮಗು. ಆಕಸ್ಮಿಕವಾಗಿ ಮನೆಯ ಮುಂದಿನ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿದೆ.
ಮನೆ ಮುಂದೆ ಆಟವಾಡುತ್ತಿದ್ದ ಮಗು ಕಾಣದಿದ್ದಾಗ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಬಳಿಕ ನೀರಿನ ತೊಟ್ಟಿಯಲ್ಲಿ ಬಿದ್ದಿರುವುದು ಗೊತ್ತಾಗಿದೆ. ಮಗುವನ್ನು ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನವಾಗಲಿಲ್ಲ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಮನಕಲಕುವ ಘಟನೆ ನಡೆದಿದೆ.