ಪ್ರಜಾ ಟಿವಿ ಮುಖ್ಯಸ್ಥರಾದ ಮುತ್ತುರಾಜ್ ಅವ್ರಿಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿಯ ಗರಿ ಲಭಿಸಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರಿನಲ್ಲಿ ನಡೆದ 39 ನೇ ರಾಜ್ಯ ಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿಯನ್ನ ನೀಡಿ ಗೌರವಿಸಲಾಗಿದೆ..
ಪ್ರಜಾ ಟಿವಿ ಸಂಸ್ಥೆಯ ಸಂಪಾದಕರಾದ ಮುತ್ತುರಾಜ್ ಜಿ.ಎಸ್ ಅವ್ರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಯನ್ನ ಪ್ರದಾನ ಮಾಡಲಾಗಿದ್ದು, ತುಮಕೂರಿನ ಎಸ್ ಎಸ್ ಐಟಿಯ ಕ್ಯಾಂಪಸ್ ನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಜೆಡಿಎಲ್ ಪಿ ನಾಯಕ ಸಿಬಿ ಸುರೇಶ್ ಬಾಬು, ಸಿಎಂ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್,ತುಮಕೂರಿನ ಜಿಲ್ಲಾಧಿಕಾರಿ ಶುಭ ಕಲ್ಯಾಣ್,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು..
ಎರಡು ದಿನಗಳ ಕಾಲ ನಡೆದ ಈ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದು, ಸಿದ್ದಗಂಗಾ ಮಠದ ಶ್ರಿ ಸಿದ್ದಲಿಂಗಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ರು. ಗ್ರಹ ಸಚಿವ ಪರಮೇಶ್ವರ, ಕೇಂದ್ರ ಸಚಿವ ವಿ. ಸೋಮಣ್ಣ . ಸಚಿವ ಕೆ.ಎನ್ ರಾಜಣ್ಣ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ರು.