ಹಾಸನ : ಟಾಕ್ಸಿಕ್ ಬಳಿಕ ಇದೀಗ ಕಾಂತಾರ ಚಿತ್ರತಂಡದ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಹೌದು, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರ ಕಾಂತಾರ 2 ಚಿತ್ರಕ್ಕಾಗಿ ಸಿನಿರಸಿಕರು ಕಾತುರದಲ್ಲಿದ್ದಾರೆ. ಚಿತ್ರೀಕರಣ ಸಹ ಭರದಿಂದಲೇ ಸಾಗುತ್ತಿದೆ. ಆದರೆ ಇದೀಗ ರಿಷಬ್ ಶೆಟ್ಟಿ ಅವರ ವಿರುದ್ಧ ಅರಣ್ಯಕ್ಕೆ ಹಾನಿಯುಂಟು ಮಾಡಿ ಚಿತ್ರೀಕರಣ ಆರೋಪ ಕೇಳಿ ಬಂದಿದೆ.
ಸಕಲೇಶಪುರ ತಾಲ್ಲೂಕಿನ, ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆರೂರು ಗ್ರಾಮದ ಬಳಿ ಕೆಲ ದಿನಗಳಿಂದ ಕಾಂತರ-2 ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣಕ್ಕಾಗಿ ಗೋಮಾಳ ಜಾಗಕ್ಕೆ ಪರವಾನಗಿ ಪಡೆದುಕೊಂಡು, ಶೂಟಿಂಗ್ ಮಾಡಲಾಗುತ್ತಿದೆ. ಆದರೆ ಅರಣ್ಯ ಜಾಗದಲ್ಲಿ ಮರಗಳನ್ನು ಕಡಿದು, ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿ ಮಾಡಲಾಗುತ್ತಿದೆ ಸ್ಥಳೀಯರು ಆರೋಪಿಸಿದ್ದಾರೆ.
ಬಿಗ್ ಬಾಸ್ ಗೆ ವಿದಾಯ ಹೇಳಿದ ಕಿಚ್ಚ ಸುದೀಪ್: ಭಾವನಾತ್ಮಕ ಪೋಸ್ಟ್ ನಲ್ಲೇನಿದೆ!?
ಸಿನಿಮಾ ಚಿತ್ರೀಕರಣಕ್ಕೆ ಯಾವೆಲ್ಲ ಪರವಾನಿಗೆ ನೀಡಿದ್ದಾರೆ ಎಂಬುವುದರ ಬಗ್ಗೆ ಅರಣ್ಯ, ಕಂದಾಯ ಇಲಾಖೆಯವರು ಬಹಿರಂಗಪಡಿಸಬೇಕು. ಅರಣ್ಯದೊಳಗೆ ಬೆಂಕಿ ಹಾಕುತ್ತಿರುವುದರಿಂದ ಕಾಡುಪ್ರಾಣಿಗಳು ಜನ ವಸತಿ ಪ್ರದೇಶಕ್ಕೆ ಬರುತ್ತಿವೆ. ವನ್ಯಜೀವಿಗಳಿರುವ ಪ್ರದೇಶದಲ್ಲಿ ಚಿತ್ರೀಕರಣ ನಡೆಸಬಾರದು. ಕೂಡಲೇ ಚಿತ್ರಿಕರಣ ಸ್ಥಗಿತಗೊಳಿಸಿ ಪರಿಸರ ಉಳಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ. ಇಲ್ಲವಾದರೆ ಜಿಲ್ಲಾಧಿಕಾಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ಎಚ್ಚರಿಸಿದ್ದಾರೆ.