ಶಿವಮೊಗ್ಗ : ಕುವೆಂಪು ವಿಶ್ವ ವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವ ಜನವರಿ 22 ರಂದು ಬೆಳಗ್ಗೆ 10.30ಕ್ಕೆ ಶಂಕರಘಟ್ಟ ವಿಶ್ವ ವಿದ್ಯಾಲಯದ ಆವರಣದಲ್ಲಿರುವ ಬಸವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಘಟಿಕೋತ್ಸವದ ಅಗ್ರಾಸನವನ್ನು ರಾಜ್ಯಪಾಲರು ಹಾಗೂ ವಿವಿ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೊಟ್ ವಹಿಸಲಿದ್ದು, ಸಚಿವ ಹಾಗೂ ವಿವಿಯ ಸಹ ಕುಲಾಧಿಪತಿ ಡಾ.ಎಂ.ಸಿ. ಸುಧಾಕರ್ ಉಪಸ್ಥಿತರಿದ್ದು, ಮುಖ್ಯ ಅತಿಥಿಯಾಗಿ ಹೈದರಾಬಾದ್ ವಿವಿ ನಿವೃತ್ತ ಕುಲಪತಿ ಪ್ರೊ. ರಾಮ್ ರಾಮಸ್ವಾಮಿ ಘಟಿಕೋತ್ಸ ಭಾಷಣ ಮಾಡಲಿದ್ದಾರೆ ಎಂದರು.
ಘಟಿಕೋತ್ಸವದಲ್ಲಿ 6872 ಪುರುಷರು ಹಾಗೂ 12013 ಮಹಿಳೆಯರು ಸೇರಿ ಒಟ್ಟು 18885 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ. ಘಟಿಕೋತ್ಸವದಲ್ಲಿ 146 ಸ್ವರ್ಣ ಪದಕಗಳಿದ್ದು, ಇವುಗಳಲ್ಲಿ 13 ಪುರುಷರು ಹಾಗೂ 71 ಮಹಿಳೆಯರು ಸೇರಿ ಒಟ್ಟು 84 ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ. ಪಿಹೆಚ್ಡಿ ಪದವಿಯನ್ನು 115 ಪುರುಷರು ಹಾಗೂ 89 ಮಹಿಳೆಯರು ಪಡೆಯಲಿದ್ದಾರೆ.
ಪ್ರಜಾಟಿವಿ ಸಂಪಾದಕ ಮುತ್ತುರಾಜ್’ರಿಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿಯ ಗರಿ!
ಕಲಾನಿಕಾಯದ ಎಂ.ಎ ವಿದ್ಯಾರ್ಥಿ ವಸಂತ್ ಕುಮಾರ್ ಒಟ್ಟು 10 ಹಾಗೂ ಒಂದು ನಗದು ಬಹುಮಾನ ಪಡೆಯುವ ಮೂಲಕ ಘಟಿಕೋತ್ಸವದಲ್ಲೇ ಅತೀ ಹೆಚ್ಚು ಪದಕ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಆನಂತರದ ಸ್ಥಾನದಲ್ಲಿ ಎಂಎಸ್ಸಿ( ಪರಿಸರ ವಿಜ್ಞಾನ) ಯಲ್ಲಿ ಸಾನಿಯಾ ಪಿರ್ದೋಸ್ ಇದ್ದು,ಅವರಿಗೆ 6 ಪದಕ ಪಡೆದಿದ್ದಾರೆ. ಮೂರನೇ ಸ್ಥಾನದಲ್ಲಿ ಎಂಎ ಸಮಾಜಶಾಸ್ರ್ತ ವಿಭಾಗದ ರಕ್ಷೀತಾ ಎ.ಎಸ್., ಎಂಬಿಎ ವ್ಯವಹಾರ ನಿರ್ವಹಣಾ ಅಧ್ಯಯನ ವಿಭಾಗದ ರಕ್ಷೀತ್ ಎಸ್., ಎಂಎಸ್ಸಿ ಜೈವಿಕ ತಂತ್ರಜ್ಞಾನ ವಿಭಾಗದ ಶುಭಶ್ರೀ ಎಸ್., ಹಾಗೂ ಆಚಾಋಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಬಿಕಾಂ ವಿದ್ಯಾರ್ಥಿನಿ ಹರ್ಷಿತಾ ಜಿ., ಅವರು ತಲಾ 5 ಪದಕ ಪಡೆದಿದ್ದಾರೆ ಎಂದರು.
ಘಟಿಕೋತ್ಸವದ ಭಾಗವಾಗಿ ವಿಶ್ವ ವಿಶ್ವವಿದ್ಯಾಲಯವು ಹಿರಿಯ ಮುತ್ಸದ್ದಿ ಹಾಗೂ ವಿಧಾನ ಸಭೆಯ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ, ಮುಂಬೈನ ವಿಜ್ಞಾನಿ ಸಿ.ಎಸ್. ಉನ್ನಿಕೃಷ್ಣನ್ ಮತ್ತು ಭದ್ರಾವತಿಯ ಯೋಗ ಗುರು ನಾಗರಾಜ್ ಅವರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಿದ್ದು, ಅವರಿಗೆ ವಿಶ್ವ ವಿದ್ಯಾಲಯದ ಕುಲಾಧಿಪತಿಗಳೂ ಆದ ರಾಜ್ಯಪಾಲ ಥಾವರ್ಚೆಂದ್ ಗೆಹ್ಲೊಟ್ ಅವರು ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಲಿದ್ದಾರೆಂದರು.