ಬೆಂಗಳೂರು: ಕೇಸರಿ ಕೋಟೆಯಲ್ಲಿ ಕಮಲಾಧ್ಯಕ್ಷರ ಬದಲಾವಣೆಗೆ ಕೂಗೂ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಹೀಗಾಗಿ ರಾಜಾಧ್ಯಕ್ಷ ಹುದ್ದೆಗೆ ಚುನಾವಣೆ ನಡೆಸಲು ಮುಹೂರ್ತ ಫಿಕ್ಸ್ ಆಗೋ ಮೊದಲೇ ಕುರ್ಚಿ ಕದನ ಜೋರಾಗಿದೆ ಇದರ ಬೆನ್ನಲ್ಲೇ ನನ್ನ ಟಾರ್ಗೆಟ್ ಮಾಡೋರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನನ್ನನ್ನು ಟಾರ್ಗೆಟ್ ಮಾಡೋರು ಮಾಡಿಕೊಳ್ಳಲಿ. ನನ್ನ ಟಾರ್ಗೆಟ್ ಮಾಡೋರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ. ನಾನು ಕೆಲಸ ಮಾಡಲು ಬಂದಿದ್ದೇನೆ. ಕೆಲಸ ಮಾಡಿಕೊಂಡು ಹೋಗುತ್ತಾರೆ. ಕೆಲಸ ಇಲ್ಲದೇ ಇರೋರು ಮಾತನಾಡುತ್ತಾರೆ, ಮಾತನಾಡಲಿ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಲೇವಡಿ ಮಾಡಿದರು.
Weight Gain: ಈ ಲಕ್ಷಣಗಳು ನಿಮ್ಮಲ್ಲಿ ಕಾಣುತ್ತಿದೆಯಾ..? ನಿಮ್ಮ ದೇಹದ ತೂಕ ಹೆಚ್ಚುತ್ತಿದೆ ಎಚ್ಚರ!
ಯತ್ನಾಳ್ ವಿರುದ್ಧ ಕ್ರಮದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾರು ಕ್ರಮ ಕೈಗೊಳ್ಳಬೇಕೋ ಅವರು ತೆಗೆದುಕೊಳ್ಳುತ್ತಾರೆ. ಫೆಬ್ರವರಿ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಇದೆ. ಪಕ್ಷದ ಇವತ್ತಿನ ಬೆಳವಣಿಗೆಗಳ ಬಗ್ಗೆ ಕಾರ್ಯಕರ್ತರ ನೋವು ಇದೆ. ಆ ನೋವು ಏನು ಎಂದು ಅರ್ಥ ಆಗುತ್ತೆ. ಇದೆಲ್ಲದಕ್ಕೂ ಇತಿಶ್ರೀ ಹಾಡೋ ಕೆಲಸ ಹೈಕಮಾಂಡ್ ಮಾಡುತ್ತದೆ ಎಂದು ತಿಳಿಸಿದರು.