ಬೆಂಗಳೂರು: ವಿಜಯಪುರದ ಇಟ್ಟಿಗೆ ಕಾರ್ಖಾನೆಯಲ್ಲಿ ಮೂವರು ಕಾರ್ಮಿಕರ ಮೇಲೆ ನಡೆದ ಭೀಕರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ, ಆರೋಪಿಗಳ ಬಂಧನಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾರ್ಮಿಕರ ಮೇಲೆ ಹಲ್ಲೆ ಖಂಡನೀಯ, ಈ ಕುರಿತು ಎಸ್ಪಿ ಜೊತೆ ಸಂಪರ್ಕದಲ್ಲಿದ್ದೇನೆ. ಪೊಲೀಸರಿಂದ ನಾನು ಮಾಹಿತಿ ಪಡೆದಿದ್ದೇನೆ. ಈಗಾಗಲೇ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಎಪಿಎಂಸಿ ವ್ಯಾಪ್ತಿಯ ಬಾವಿಕಟ್ಟಿ ತಾಂಡಾದಲ್ಲಿ ಈ ಘಟನೆ ನಡೆದಿದೆ.
Weight Gain: ಈ ಲಕ್ಷಣಗಳು ನಿಮ್ಮಲ್ಲಿ ಕಾಣುತ್ತಿದೆಯಾ..? ನಿಮ್ಮ ದೇಹದ ತೂಕ ಹೆಚ್ಚುತ್ತಿದೆ ಎಚ್ಚರ!
ಮೂವರು ದಲಿತ ಸಮುದಾಯಕ್ಕೆ ಸೇರಿದವರು. ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮ ಜರುಗಿಸುತ್ತೇವೆ. ಈ ಕುರಿತು ಜಿಲ್ಲಾಧಿಕಾರಿಯ ಜೊತೆಗೂ ಮಾತನಾಡಿದ್ದೇನೆ. ಮಾಲೀಕ ಖೇಮು ರಾಠೋಡ ಕಾಂಪ್ರಮೈಸ್ಗೂ ಯತ್ನ ನಡೆಸಿದ್ದ. ಆದರೆ ಅದ್ಯಾವುದಕ್ಕೂ ಅವಕಾಶ ಕೊಡದೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.