ಬೆಂಗಳೂರು:- ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Muda Scam: ಸಿಎಂ ಸಿದ್ದರಾಮಯ್ಯರೇ ಯಾಕೆ ಟಾರ್ಗೆಟ್!? ಕೆಎಂ ಶಿವಲಿಂಗೇಗೌಡ ಪ್ರಶ್ನೆ!
ಈ ಸಂಬಂಧ ಮಾತನಾಡಿದ ಅವರು, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು.
ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಕುರಿತುc ಪ್ರತಿಕ್ರಿಯೆ ನೀಡಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದರು.
ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.