ಬೆಂಗಳೂರು:- ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ನೆನಪಿಗಾಗಿ ನಾಳೆ ಕಾಂಗ್ರೆಸ್ ಬೆಳಗಾವಿಯಲ್ಲಿ ಸಮಾವೇಶ ಮಾಡುತ್ತಿದೆ. 1924ರ ಕಾಂಗ್ರೆಸ್ಗೂ ಇಂದಿನ ಕಾಂಗ್ರೆಸ್ ಪಕ್ಷಕ್ಕೂ ಎಲ್ಲಿಯ ಸಂಬಂಧ ಎಂದು ವಾಗ್ದಾಳಿ ಮಾಡಿದ್ದಾರೆ.
ನಾಳೆ ಕಾಂಗ್ರೆಸ್ (ಐ) ಪಕ್ಷವು ಬೆಳಗಾವಿಯಲ್ಲಿ ಸಮಾವೇಶ ನಡೆಸಲಿದೆ. ಈ ಸಮಾವೇಶ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರ ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ನೆನಪಿಗಾಗಿ. 1924ರ ಕಾಂಗ್ರೆಸ್ಗೂ ಇವತ್ತಿನ ಕಾಂಗ್ರೆಸ್ (ಐ) ಪಕ್ಷಕ್ಕೂ ಎಲ್ಲಿಯ ಸಂಬಂಧ. ಸ್ವತಃ ರಾಷ್ಟ್ರಪಿತ ಮಹಾತ್ಮಗಾಂಧಿ ಸ್ವಾತಂತ್ರ್ಯನಂತರ ಕಾಂಗ್ರೆಸ್ ವಿಸರ್ಜಿಸಲು ಕರೆ ಕೊಟ್ಟಿದ್ದರು. ಇಂದಿನ ನಕಲಿ ಗಾಂಧಿಗಳು ಸೇರಿ ನಕಲಿ ಕಾಂಗ್ರೆಸ್ ಪಕ್ಷದ ಸಮಾವೇಶವನ್ನು ಸರ್ಕಾರದ ದುಡ್ಡಿನಲ್ಲಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅಂಬೇಡ್ಕರ ಅವರಿಗೆ ಭಾರತೀಯ ಜನತಾ ಪಕ್ಷದ ಬೆಂಬಲದ ಸರ್ಕಾರ ಅಧಿಕಾರದಲ್ಲಿದ್ದಾಗ ಆಗಿನ ಪ್ರಧಾನಿ ವಿ.ಪಿ. ಸಿಂಗ್ ಅವರ ಸರ್ಕಾರ ಭಾರತ ರತ್ನ ನೀಡಿತು. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಬಾಬಾಸಾಹೇಬರ ಭಾವಚಿತ್ರಕ್ಕೆ ಹೆಮ್ಮೆಯ ಸ್ಥಾನವನ್ನು ನಿರಾಕರಿಸಿದರು. ಸಂವಿಧಾನ ಶಿಲ್ಪಿಯ ಶವಸಂಸ್ಕಾರಕ್ಕೂ ಜಾಗ ನೀಡಲಿಲ್ಲ. ಅವರ ವಾಸ ಮಾಡುತ್ತಿದ್ದ ಮನೆಯನ್ನು ಸ್ಮಾರಕ ಮಾಡಲು ಅವಕಾಶ ನೀಡಲಿಲ್ಲ. ಮುಂಬೈಯಲ್ಲಿಯೂ ಅವರ ಸ್ಮಾರಕ ಮಾಡಲಿಲ್ಲ. ನೆಹರು ಅವರು ಡಾ.ಬಾಬಾಸಾಹೇಬ ಅಂಬೇಡ್ಕರ ಅವರು ಮಂತ್ರಿಮಡಲಕ್ಕೆ ರಾಜಿನಾಮೆ ನೀಡಿದಾಗ ” ಅವರ ರಾಜಿನಾಮೆಯಿಂದ ಏನೂ ಆಗುವದಿಲ್ಲ” ಎಂದು ನೆಹರೂ ಹೇಳಿಕೆ ನೀಡಿದರು ಎಂದರು.