ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ನ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ. ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿದೆ.
ತ್ರಿವಿಧ ದಾಸೋಹಿಗೆ 6ನೇ ಪುಣ್ಯಸ್ಮರಣೆ: ಇಂದು ಸಿದ್ಧಗಂಗಾ ಮಠದಲ್ಲಿ ಸಂಸ್ಮರಣೋತ್ಸವ!
ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಕಾಡ್ಗಿಚ್ಚಿಗೆ ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ. ಇನ್ನು ಬೆಂಕಿ ಹೆಚ್ಚಾಗುತ್ತಿದ್ದಂತೆ ಪ್ರಾಣಿ ಸಂಕುಲ ದಿಕ್ಕೆಟ್ಟು ಓಡಿದೆ.
ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಹರಸಾಹಸಪಟ್ಟಿದ್ದಾರೆ.