ಬೆಂಗಳೂರು:- ಚಿನ್ನ ವಂಚಕಿ ಐಶ್ವರ್ಯಗೌಡ ವಿರುದ್ಧ ಮಂಡ್ಯದಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಚಾರ್ಮಾಡಿ ಘಾಟ್ ಗುಡ್ಡದ ತುದಿಯಲ್ಲಿ ಕಾಡ್ಗಿಚ್ಚು – ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ!
ಭಾಗ್ಯಮ್ಮ ಎಂಬುವವರು ತಮಗೂ ವಂಚನೆ ಮಾಡಿರುವುದಾಗಿ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಮೇರೆಗೆ ಐಶ್ವರ್ಯಗೌಡ ವಿರುದ್ಧ ಐಪಿಸಿ ಸೆಕ್ಷನ್ 406, 420, 417, 120ಬಿ, 540, 34ರ ಅಡಿ ಕೇಸ್ ದಾಖಲಾಗಿದೆ. ನವ್ಯಶ್ರೀ ಅಲಿಯಾಸ್ ಐಶ್ವರ್ಯಗೌಡ, ಪತಿ ಹರೀಶ್, ಸಹೋದರ ಮಂಜುನಾಥ್ ಹಾಗೂ ಯಶವಂತ್ ಎಂಬುವರ ಪ್ರಕರಣ ದಾಖಲಾಗಿದೆ
ಮೊದಲು ರಿಯಲ್ ಎಸ್ಟೇಟ್ ಹಾಗೂ ಚೀಟಿ ವ್ಯವಹಾರ ಮಾಡುವುದಾಗಿ ಐಶ್ವರ್ಯ ನಂಬಿಸಿದ್ದಾಳೆ. ಒಟ್ಟು 33 ಲಕ್ಷ ರೂ. ನಗದು ಹಾಗೂ 366 ಗ್ರಾಂ ಚಿನ್ನದ ಒಡವೆಗಳನ್ನ ಪಡೆದುಕೊಂಡಿದ್ದಾಳೆ. ಇದು ತನ್ನ ಮೃತ ಗಂಡನ ನಿವೃತ್ತಿಯ ಹಣ ಅಂತ ಭಾಗ್ಯಮ್ಮ ಹೇಳಿಕೊಂಡಿದ್ದಾಳೆ. 1 ಲಕ್ಷಕ್ಕೆ 10 ಪರ್ಸೆಂಟ್ ಬಡ್ಡಿ ಹಣ ನೀಡುವುದಾಗಿ ಆಮಿಷ ಒಡ್ಡಿ ಹಣ ಪಡೆದ ಐಶ್ವರ್ಯ ವಂಚನೆ ಎಸಗಿದ್ದಾಳೆ ಎಂದು ದೂರಿನಲ್ಲಿ ಭಾಗ್ಯಮ್ಮ ತಿಳಿಸಿದ್ದಾರೆ.