ತುಮಕೂರು: ಬೈಕ್ನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ ಮಾಡಿದ ಆರೋಪಿಗಳನ್ನು ಪೊಲೀಸರು ಕೇವಲ ಒಂದೇ ತಾಸಿನಲ್ಲಿ ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹಳೆತಿಮ್ಮನಹಳ್ಳಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ.
ಜಮೀನಿನಲ್ಲಿ ಹೂವು ಬಿಡುಸುತ್ತಿದ್ದ ಲಿಖಿತ ಎಂಬ ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದರು. ಕೂಡಲೇ ಲಿಖಿತ ಕೊಡಿಗೇನಹಳ್ಳಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಒಂದೇ ಗಂಟೆಯಲ್ಲಿ ಆರೋಪಿಗಳನ್ನು ಪತ್ತೆ ಹೆಚ್ಚಿದ್ದಾರೆ. ಮಧುಗಿರಿ ಪಟ್ಟಣದ ಗೌರಿಬಿದನೂರು ರಸ್ತೆಯ ಬಳಿ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಇನ್ನೂ ಪೊಲೀಸರ ಕಾರ್ಯವೈಖರಿಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ..