ಇತ್ತೀಚೆಗೆ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿರುವ ಗೇಮ್ ಚೇಂಜರ್ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಖ್ಯಾತ ನಿರ್ಮಾಪಕ ದಿಲ್ ರಾಜು ಅವರಿಗೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. 450 ಕೋಟಿ ರೂಪಾಯಿ ಬಜೆಟ್ನಲ್ಲಿ ನಿರ್ಮಾಣ ಮಾಡಿದ ರಾಮ‘ಗೇಮ್ ಚೇಂಜರ್’ ಸಿನಿಮಾ ನಷ್ಟ ಅನುಭವಿಸುತ್ತಿರುವಾಗಲೇ ತೆರಿಗೆ ಇಲಾಖೆ ತಂಡದವರು ದಿಲ್ ರಾಜು ಮನೆ, ಕಚೇರಿ ಹಾಗೂ ಅವರ ಕುಟುಂಬದ ಮೇಲೆ ದಾಳಿ ನಡೆಸಿದ್ದು ಈ ವೇಳೆ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಂಕ್ರಾಂತಿ ವೇಳೆ ದಿಲ್ ರಾಜು ನಿರ್ಮಾಣದ ‘ಗೇಮ್ ಚೇಂಜರ್’ ಹಾಗೂ ‘ಸಂಕ್ರಾಂತಿಕಿ ವಸ್ತುನ್ನಾಮ್’ ಚಿತ್ರಗಳು ರಿಲೀಸ್ ಆಗಿವೆ. ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ‘ಗೇಮ್ ಚೇಂಜರ್’ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದ್ರೆ ‘ಸಂಕ್ರಾಂತಿಕಿ ವಸ್ತುನಾಮ್’ ಚಿತ್ರ ಸೂಪರ್ ಡೂಪರ್ ಹಿಟ್ ಎನಿಸಿಕೊಂಡಿದೆ.
ದಿಲ್ ರಾಜು ಜೊತೆ ‘ಪುಷ್ಪ 2’ ಚಿತ್ರ ನಿರ್ಮಾಣ ಸಂಸ್ಥೆ ಮೇಲೂ ಐಟಿ ಅಧಿಕಾರಿಗಳ ದಾಳಿ ಮಾಡಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ನವೀನ್, ಸಿಇಒ ಚರ್ರಿ ಕಚೇರಿ ಹಾಗೂ ಆಪ್ತರ ಕಚೇರಿಗಳಲ್ಲೂ ಐಟಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ಆಗಿದೆ. ವೆಂಕಟೇಶ್ವರ ಪ್ರೊಡಕ್ಷನ್ ಸಂಸ್ಥೆಯಲ್ಲೂ ಐಟಿ ತಂಡದವರು ದಾಖಲೆ ಪರಿಶೀಲನೆ ಮಾಡಿದ್ದಾರೆ.