ಬೆಳಗಾವಿ: ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸವಿನೆನಪಿಗೆ ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು ಬೆಳಿಗ್ಗೆ 10.30ಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಪಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾವರಣ ಮಾಡುವುದರಲ್ಲಿದ್ದರು.
ಆದ್ರೆ ಅನಾರೋಗ್ಯ ರಾಹುಲ್ ಗಾಂಧಿ ಬೆಳಗಾವಿ ಪ್ರವಾಸ ರದ್ದುಗೊಳಿಸಿದ್ದಾರೆ. ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿ ಇನ್ನಿತರ ನಾಯಕರು ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು ಉಪಸ್ಥಿತರಿರಲಿದ್ದಾರೆ.
ಮಂಗಳವಾರ ಈ ಕೆಲಸಗಳನ್ನು ಮಾಡಿದ್ರೆ ನಿಮಗೆ ಬೇಡವೆಂದರೂ ಸಂಪತ್ತು ಹುಡುಕಿ ಬರುತ್ತೆ.!
ಇದೇ ವೇಳೆ ಶತಮಾನದ ಹಿಂದೆ ನಡೆದ ಅಧಿವೇಶನದಲ್ಲಿ ಗಾಂಧೀಜಿ ಮಾಡಿದ್ದ ಅಧ್ಯಕ್ಷೀಯ ಭಾಷಣದ ಸಂದೇಶ ಮತ್ತು ‘ಗಾಂಧಿ ಭಾರತ’ ಪುಸ್ತಕ ಬಿಡುಗಡೆ ಆಗಲಿದೆ. ಬೆಳಗಾವಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಕಾಂಗ್ರೆಸ್ 2 ಲಕ್ಷ ಜನರನ್ನು ಸೇರಿಸಿ ರಣಕಹಳೆ ಮೊಳಗಿಸಲಿದೆ.
ದೇಶ್ಯಾದ್ಯಂತ ಬಿಜೆಪಿ ವಿರುದ್ಧ ಜನಾಂದೋಲನಕ್ಕೆ ಬೆಳಗಾವಿಯಿಂದಲೇ ರಣಕಹಳೆ ಮೊಳಗಿಸುವುದಕ್ಕೂ ಕೈ ನಾಯಕರು ಸಜ್ಜಾಗಿದೆ. ಐತಿಹಾಸಿಕ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ನಿಯೋಜಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ನೇತೃತ್ವದಲ್ಲಿ ಸುಮಾರು 3,500 ಜನ ಪೊಲೀಸ್ ಸಿಬ್ಬಂದಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.