ಬೆಂಗಳೂರು:- ಕರ್ನಾಟಕದ ಹಲವೆಡೆ ನಾಳೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬೆತ್ತಲೆಯಲ್ಲೇ ಓಡಾಡುವ ಮಹಿಳಾ ನಾಗಸಾಧುಗಳು ಮಟ್ಟಿನ ವೇಳೆ ಏನ್ ಮಾಡ್ತಾರೆ! ಇದು ಅಚ್ಚರಿ ಆದ್ರೂ ಸತ್ಯ!
ಕರಾವಳಿ ಜಿಲ್ಲೆಗಳಲ್ಲಿ ಕೂಡ ಮಳೆ ಮುನ್ಸೂಚನೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಮೇತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡೂ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹೇಳಿದೆ.
ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇಷ್ಟೇ ಅಲ್ಲ, ಕೋಲಾರ, ಬೆಂಗಳೂರು, ಮೈಸೂರು, ತುಮಕೂರು, ಶಿವಮೊಗ್ಗ, ಧಾರವಾಡ, ದಾವಣಗೆರೆ, ರಾಮನಗರ, ಹಾಸನ, ಮಡಿಕೇರಿ, ಕೊಡಗು, ಮಂಡ್ಯ, ಚಾಮರಾಜನಗರದಲ್ಲೂ ಮಳೆ ಆಗಲಿದೆ.
ಮೋಡ ಕವಿದ ವಾತಾವರಣದ ಕಾರಣ ಚಳಿ ಪ್ರಮಾಣ ಕಡಿಮೆಯಾಗಲಿದೆ. ಬೆಂಗಳೂರಲ್ಲಿ ಹಲವು ಕಡೆ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಿದೆ. ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಮಂಗಳೂರು, ಉಡುಪಿಯಲ್ಲಿ ವರುಣನ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.