ಬೆಂಗಳೂರು:- ಮಹಾತ್ಮ ಗಾಂಧಿ ಸಿದ್ಧಾಂತಕ್ಕೂ ಇಂದಿನ ಗಾಂಧಿಗಳ ಕಾಂಗ್ರೆಸ್ಸಿನ ಸಿದ್ಧಾಂತಕ್ಕೂ ಅಜಗಜಾಂತರವಿದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಇನ್ಫೋಸಿಸ್ ನಲ್ಲಿದೆ ಭರ್ಜರಿ ಉದ್ಯೋಗ! ಅರ್ಹತೆ ಏನು!?
ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಇಂದಿನ ಸಮಾವೇಶಕ್ಕೆ ಬಳಸಿದ ಹಣ ಯಾವುದು? ಅದರ ಲೆಕ್ಕ ಕೊಡಬೇಕು ಎಂದರು. ಅದು ಕಾಂಗ್ರೆಸ್ಸಿನ ಖಾತೆಯಿಂದ ಖರ್ಚಾದ ಹಣವೇ? ಅಥವಾ ನೀವು ಸರ್ಕಾರದ ಬೊಕ್ಕಸದಿಂದ ಖರ್ಚು ಮಾಡಿದ್ದೀರಾ ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದರು. ಸುವರ್ಣಸೌಧದ ಮುಂದೆ ಗಾಂಧಿ ಪ್ರತಿಮೆಯನ್ನು ಇವತ್ತು ಪ್ರತಿಷ್ಠಾಪನೆ ಮಾಡಿದ್ದಾರೆ. ಸರ್ಕಾರಿ ಬೊಕ್ಕಸದಿಂದ ಗಾಂಧಿ ಪ್ರತಿಮೆ ಪ್ರತಿಷ್ಠಾಪನೆಗೆ ನಮ್ಮ ವಿರೋಧವಿಲ್ಲ ಎಂದು ತಿಳಿಸಿದರು.
ಇದು ಮಹಾತ್ಮ ಗಾಂಧಿಯವರ ಕಾಲದ ಕಾಂಗ್ರೆಸ್ ಪಕ್ಷ ಅಲ್ಲ. ಮಹಾತ್ಮ ಗಾಂಧಿ ಸಿದ್ಧಾಂತಕ್ಕೂ ಇವತ್ತಿನ ಗಾಂಧಿಗಳ ಕಾಂಗ್ರೆಸ್ಸಿನ ಸಿದ್ಧಾಂತಕ್ಕೂ ಅಜಗಜಾಂತರವಿದೆ. ಅವತ್ತಿನ ಗಾಂಧಿ ಕಾಂಗ್ರೆಸ್ ಪಕ್ಷಕ್ಕೆ ಯಾರು ಮದ್ಯಪಾನ ಮಾಡುತ್ತಿದ್ದರೋ ಅವರು ಸದಸ್ಯರಾಗುವ ಹಾಗಿರಲಿಲ್ಲ. ಇವತ್ತಿನ ಕಾಂಗ್ರೆಸ್ಸಿನವರು ರಾತ್ರಿಯಿಡೀ ಕುಡಿದು ಮಲಗಿದ್ದು, ಬೆಳಗ್ಗೆ ಸಮಾವೇಶ ಮಾಡುತ್ತಾರೆ ಎಂದು ಟೀಕಿಸಿದರು.
ಎಲ್ಲರೂ ಖಾದಿಧಾರಿಗಳಾಗಿ ಇರಬೇಕು ಎಂಬುದು ಹಳೆ ಕಾಂಗ್ರೆಸ್ಸಿನ ಸಿದ್ಧಾಂತ. ಇವತ್ತು ಶೇ. 5-10 ರಷ್ಟು ಖಾದಿಧಾರಿಗಳೂ ಅಲ್ಲಿ ಸಿಗುವುದಿಲ್ಲ ಎಂದು ವ್ಯಂಗ್ಯವಾಡಿದರು. ಮಹಾತ್ಮ ಗಾಂಧಿಯವರು ಈ ಕಾಲದಲ್ಲಿ ಇದ್ದಿದ್ದರೆ, ಈ ಕಾಂಗ್ರೆಸ್ಸಿನವರನ್ನು ಅಟ್ಟಾಡಿಸಿ, ಕಾಂಗ್ರೆಸ್ಸಿನಿಂದ ಹೊರಕ್ಕೆ ಓಡಿಸುತ್ತಿದ್ದರು ಎಂದು ಟಾಂಗ್ ಕೊಟ್ಟರು