ಬೆಂಗಳೂರು:- ಬಿಜೆಪಿ-ಜೆಡಿಎಸ್ ಶಾಸಕರು ಕಾಂಗ್ರೆಸ್ಗೆ ಸೇರ್ಪಡೆ ಆಗುತ್ತಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಬಿಜೆಪಿ ಎಂಎಲ್ಸಿ ರವಿಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಮಹಾತ್ಮ ಗಾಂಧಿ ಸಿದ್ಧಾಂತಕ್ಕೂ ಇಂದಿನ ಗಾಂಧಿಗಳ ಕಾಂಗ್ರೆಸ್ಸಿನ ಸಿದ್ಧಾಂತಕ್ಕೂ ಅಜಗಜಾಂತರವಿದೆ: ಛಲವಾದಿ ನಾರಾಯಣಸ್ವಾಮಿ!
ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ದುರಾಡಳಿತವನ್ನು ಮುಚ್ಚಿ ಹಾಕಿಕೊಳ್ಳೋಕೆ ಇಂತಹ ವಿಷಯ ಪ್ರಸ್ತಾಪ ಮಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಶಾಸಕರು ಕಾಂಗ್ರೆಸ್ಗೆ ಹೋಗುತ್ತಾರೆ ಎಂದು ಕಾಂಗ್ರೆಸ್ನವರು ಹಗಲುಗನಸು ಕಾಣುತ್ತಿದ್ದಾರೆ. ಕಾಂಗ್ರೆಸ್ನವರು ಮೊದಲು ಸಿಎಂ ಚೇರ್ ಉಳಿಸಿಕೊಳ್ಳೋದು ನೋಡಲಿ ಅಂತ ತಿರುಗೇಟು ಕೊಟ್ಟರು.
ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಸಿಎಂ ಕುರ್ಚಿಗೆ ಕಿತ್ತಾಟ ಮಾಡುತ್ತಿದ್ದಾರೆ. ಮೊದಲು ಅದನ್ನು ಸರಿಮಾಡಿಕೊಳ್ಳಿ. ಮೊದಲು ನಿಮ್ಮ ಶಾಸಕರ ಬೇಡಿಕೆ ಈಡೇರಿಸಿ. ಮೊದಲು ನಿಮ್ಮ ಶಾಸಕರಿಗೆ ಅನುದಾನ ಕೊಡಿ. ಕಾಂಗ್ರೆಸ್ ಶಾಸಕರೇ ಈ ಸರ್ಕಾರದ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಅವರನ್ನ ಸಮಾಧಾನ ಮಾಡೋ ಕೆಲಸ ಕಾಂಗ್ರೆಸ್ ಮಾಡಲಿ. ಆಮೇಲೆ ನಮ್ಮ ಶಾಸಕರ ಬಗ್ಗೆ ಯೋಚನೆ ಮಾಡಲಿ. ಬಿಜೆಪಿ-ಜೆಡಿಎಸ್ನ ಯಾವ ಶಾಸಕರು ಕಾಂಗ್ರೆಸ್ ಹೋಗೋದಿಲ್ಲ ಎಂದು ಸ್ಪಷ್ಟಪಡಿಸಿದರು.